ಡಿ.ಕೆ.ಶಿವಕುಮಾರ್ 
ರಾಜ್ಯ

ಕುಮಾರಸ್ವಾಮಿ ರಾಜಕಾರಣ ಬಿಟ್ಟು ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಲಿ: ಡಿಸಿಎಂ ಡಿ.ಕೆ ಶಿವಕುಮಾರ್

ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು ಹೋಗಲಿ.

ಬೆಂಗಳೂರು: ಕುಮಾರಸ್ವಾಮಿ ರಾಜಕಾರಣ, ಬೇರೆ ಮಾತು ಎಲ್ಲವನ್ನು ಬಿಟ್ಟು ರಾಜ್ಯದಲ್ಲಿ 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್ ಸರ್ಕಾರ ಅವರಿಗೆ ಬೇಕಾದಂತಹ ಸಹಕಾರ ನೀಡುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕುಮಾರಸ್ವಾಮಿಗೆ ಮೋದಿ ಅವರು ಉಕ್ಕು, ಕೈಗಾರಿಕೆ ಎನ್ನುವ ದೊಡ್ಡ ಹಾಗೂ ಉತ್ತಮ ಖಾತೆ ಕೊಟ್ಟಿದ್ದಾರೆ. ಅವರಿಗೆ ಸಿಕ್ಕಿರುವ ಒಳ್ಳೇ ಅವಕಾಶ ಬಳಸಿಕೊಳ್ಳಲಿ” ಎಂದರು. ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು ಹೋಗಲಿ. ರಾಜಕೀಯ ಇದ್ದಿದ್ದೇ, ಏಕೆ ಇಂತಹ ಅವಕಾಶವನ್ನು ಕಳೆದುಕೊಳ್ಳುತ್ತಾ ಇದ್ದಾರೆ” ಎಂದು ಡಿಕೆಶಿ ವ್ಯಂಗ್ಯವಾಡಿದ್ದಾರೆ.

“ನಾವೆಲ್ಲಾ ಪ್ರತಿದಿನ ರಾಜಕೀಯ ಮಾಡುತ್ತಲೇ ಇರುತ್ತೇವೆ. ಅಭಿವೃದ್ದಿಯಿದ್ದರೇ ತಾನೇ ರಾಜಕೀಯ.ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ.ಎತ್ತಿನಹೊಳೆ ಕೆಲಸ ಮುಗಿಸಬೇಕು, ಪ್ರಣಾಳಿಕೆಗಳಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಬೇಕು. ಪ್ರತಿದಿನ ಸಮಯ ಓಡುತ್ತಿರುತ್ತದೆ” ಎಂದು ಹೇಳಿದ್ದಾರೆ. “ನಾವು 136 ಕಾಂಗ್ರೆಸ್ ಶಾಸಕರು ಒಟ್ಟಿಗೆ ಇದ್ದೇವೆ. ಇಲ್ಲಿ ಚರ್ಚೆ ಮಾಡುವಾಗ ಅಧಿಕಾರಿಗಳು ಬೇಕಾಗಿಲ್ಲ. ನಾಯಕರ ಹಿಂದೆ ಅಧಿಕಾರಿಗಳು ಬೇಕಾಗಿಲ್ಲ.ನಾವು ಆಲೋಚಿಸುತ್ತೇವೆ, ಚರ್ಚೆ ಮಾಡುತ್ತೇವೆ, ಅಭಿಪ್ರಾಯ ಕೇಳುತ್ತೇವೆ. ಮಾತನಾಡುವವರು ಹಾಗೂ ತೀರ್ಮಾನಿಸುವವರು ಒಬ್ಬರೇ” ಎಂದು ಹೇಳಿದರು.

ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ದ ಕುಮಾರಸ್ವಾಮಿ ಅವರ ಆರೋಪದ ಪ್ರತಿಕ್ರಿಯಿಸಿದ ಡಿಕೆಶಿ, “ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಅವರು. ಅದಕ್ಕೂ ನನಗೂ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಬೀಳಿಸಲು 1 ಸಾವಿರ ಕೋಟಿ ಮೀಸಲಿಡಲಾಗಿದೆ ಎನ್ನುವ ಯತ್ನಾಳ್ ಅವರ ಹೇಳಿಕೆ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್, “ಇದರ ಬಗ್ಗೆ ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಪಕ್ಷ ಹಾಗೂ ಸರ್ಕಾರ ಉರುಳಿಸಲು ಈ ಕೆಲಸ ಮಾಡಲಾಗುತ್ತಿದೆ. ನಮ್ಮ ಕಾನೂನು ಸಲಹೆಗಾರರ ಬಳಿ ಚರ್ಚೆ ನಡೆಸಲಾಗುವುದು.ಈ ಕೃತ್ಯ ಐಟಿಯವರಿಂದ ತನಿಖೆಗೆ ಒಳಗಾಗಬೇಕು” ಎಂದರು.

“ಮುಂದಿನ 2025 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರನ್ನು ಹರಿಸಲು ಪ್ರಯತ್ನ ಮಾಡಲಾಗುವುದು. ಈಗಾಗಲೇ ಎತ್ತಿನಹೊಳೆ ನೀರನ್ನು ಮೇಲಕ್ಕೆ ಎತ್ತಿ ಸಂಗ್ರಹ ಮಾಡಲಾಗಿದೆ. ತುಮಕೂರು ಹಾಗೂ ಹಾಸನ ಜಿಲ್ಲೆಯಲ್ಲಿ ಅರಣ್ಯ ಭೂಮಿಯನ್ನು ಗುರುತಿಸಲಾಗಿದೆ. ಇದನ್ನು ನೀರಾವರಿ ಇಲಾಖೆಗೆ ವರ್ಗಾವಣೆ ಮಾಡಬೇಕು. ಈ ವಿಚಾರವಾಗಿ ಪ್ರತ್ಯೇಕ ಸಭೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅರಣ್ಯ ಸಚಿವರ ಬಳಿಯೂ ಮಾತನಾಡಲಾಗುವುದು” ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT