ಸಿಎಂ ಸಿದ್ದರಾಮಯ್ಯ (File Photo - Nagaraja Gadekal, EPS)
ರಾಜ್ಯ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ECIR ದಾಖಲಿಸಿದ ಇಡಿ

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚಿಗೆ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇಡಿ ECIR ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದೆ.

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚಿಗೆ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇಡಿ ECIR ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್ ಗಳಡಿ ಇಸಿಐಆರ್ ದಾಖಲಿಸಿರುವ ನಿರೀಕ್ಷೆ ಇದೆ. ಈ ಸಂಬಂಧ ಕೇಂದ್ರ ತನಿಖಾ ಸಂಸ್ಥೆಯು ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ಅನ್ನು ಅಧ್ಯಯನ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

ECIR ಪೊಲೀಸ್ ಎಫ್‌ಐಆರ್‌ಗೆ ಸಮಾನವಾಗಿದೆ. ಆದರೆ ಅದನ್ನು ಆರೋಪಿಗಳೊಂದಿಗೆ ಹಂಚಿಕೊಳ್ಳುವ ಅಗತ್ಯವಿಲ್ಲ. ಇಡಿ ದಾಖಲಿಸಿರುವ ಇಸಿಐಆರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿ ನಂಬರ್ 1 (ಎ1 ಆರೋಪಿ) ಆಗಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ವಿರುದ್ಧವೂ ಇಸಿಐಆರ್‌ನಲ್ಲಿ ಆರೋಪಿಗಳೆಂದು ಉಲ್ಲೇಖ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಇಡಿ PMLA ಕಾಯ್ದೆಯಡಿ ECIR ದಾಖಲಿಸಿದ್ದು, ಇದು ಇತರ ಕೆಲವು ಬಲವಂತದ ಕ್ರಮಗಳ ಜೊತೆಗೆ ಸಿಎಂ ಮತ್ತು ಅವರ ಕುಟುಂಬಕ್ಕೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಅಲ್ಲದೆ ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿ ಇದೆ.

ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.

ಮತ್ತೊಂದು ಕಡೆ ಸಿಬಿಐ ತೂಗುಗತ್ತಿ

ಲೋಕಾಯುಕ್ತ ತನಿಖೆ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಡಬಲ್ ಟೆನ್ಷನ್ ಶುರುವಾಗಿದೆ. ಒಂದು ಕಡೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ನಡೆಯುವ ಸಂಸ್ಥೆಯಾಗಿದೆ. ಹೀಗಾಗಿ ಪಾರದರ್ಶಕ ತನಿಖೆಯಾಗಬೇಕು ಅಂದ್ರೆ ಸಿಬಿಐಗೆ ಕೊಡಿ ಎಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ದಸರಾ ರಜೆ ಬಳಿಕ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ. ಮತ್ತೊಂದಡೆ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT