ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಕುಲಾಂತರಿ ತಳಿಯ ಬೆಳೆ ವಿರುದ್ಧ ರೈತರ ಸತ್ಯಾಗ್ರಹ

ಬಯೋ ಟೆಕ್ನಾಲಜಿ ಹಾಗೂ ಕುಲಾಂತರಿ ತಳಿಗಳ ಸಂಶೋಧನೆಗೆ ಸರ್ಕಾರ ನೆರವು ನೀಡುವುದನ್ನು ನಿಲ್ಲಿಸಬೇಕು. ಕಾರ್ಪೊರೇಟ್ ಕಂಪನಿಗಳು ಇಂತಹ ಕಾರ್ಯಗಳಿಗೆ ಹಣಕಾಸಿನ ನೆರವು ನೀಡದಂತೆ ತಡೆಯೊಡ್ಡಬೇಕು.

ತುಮಕೂರು: ಕುಲಾಂತರಿ ಆಹಾರ (ಜಿಎಂಒ) ಮತ್ತು ಬಹುರಾಷ್ಟ್ರೀಯ ಕಂಪನಿಗಳನ್ನು ಕೃಷಿ ಕ್ಷೇತ್ರದಿಂದ ಬಹಿಷ್ಕರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ದೊಡ್ಡಹೊಸೂರು ಗಾಂಧೀಜಿ ಸಹಜ ಬೇಸಾಯ ಆಶ್ರಮದಲ್ಲಿ ಸೆ. 29ರಿಂದ ಅಕ್ಟೋಬರ್ 2ರ ಗಾಂಧಿ ಜಯಂತಿವರೆಗೆ ‘ದೊಡ್ಡಹೊಸೂರು ಸತ್ಯಾಗ್ರಹ’ ಹಮ್ಮಿಕೊಳ್ಳಲಾಗಿದೆ.

ರಾಷ್ಟ್ರದ ಪಾರಂಪರಿಕ ಕೃಷಿ ಜ್ಞಾನ, ಹಿರಿಮೆ, ದೃಷ್ಟಿಕೋನ, ಆಯಾಮ ವಿಸ್ತಾರವಾಗಿದ್ದು. ಇಂತಹ ದೇಶಕ್ಕೆ ಕುಲಾಂತರಿ ಆಹಾರ ತರಲು ಬಹುರಾಷ್ಟ್ರೀಯ ಕಂಪನಿಗಳು ಪಿತೂರಿ ನಡೆಸುತ್ತಿವೆ. ಕೃಷಿ, ಸಂಸ್ಕೃತಿ, ಪರಿಸರ ಮತ್ತು ಸಮಾಜ ವಿರೋಧಿ ಕೃತ್ಯ ನಡೆಸಲು ಮುಂದಾಗಿದೆ. ಇದು ಜೈವಿಕ ವ್ಯವಸ್ಥೆ, ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ, ಕುಲಾಂತರಿ ತಳಿಯು ನಮ್ಮ ಹವಾಮಾನಕ್ಕೆ ಒಗ್ಗುವುದಿಲ್ಲ. ಇದನ್ನು ನಾವು ಒಗ್ಗಟ್ಟಾಗಿ ತಡೆಯಲೇಬೇಕು. ಕುಲಾಂತರಿ ತಳಿ ಮುಕ್ತ ದೇಶ ಎಂದು ನಮ್ಮ ದೇಶವನ್ನು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ದೊಡ್ಡಹೊಸೂರು ಸತ್ಯಾಗ್ರಹದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಿದ್ದಗಂಗಾ ಮಠದ ಪೀಠಾಧಿಪತಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಜಿಎಂ ಬೆಳೆ ವಿರೋಧಿಸಿ ರೈತರಿಗೆ ಬೆಂಬಲ ವ್ಯಕ್ತಪಡಿಸಿದರು. "ಕ್ರಿಮಿನಾಶಕಗಳ ಅತಿರೇಕದ ಬಳಕೆಗೆ ಬೇಡಿಕೆಯಿರುವ ಕಾರಣ GM ಬೆಳೆಗಳು ಕ್ಯಾನ್ಸರ್‌ಗೆ ಮೂಲ ಕಾರಣ ಎಂದು ಅನೇಕ ಸಂಶೋಧಕರು ದೃಢಪಡಿಸಿದ್ದಾರೆ. ಆದ್ದರಿಂದ, ಜಿಎಂ ಬೀಜಗಳನ್ನು ಬಳಸದಿರಲು ರೈತರು ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಇದು ಇಡೀ ರಾಜ್ಯವನ್ನು ಮಾತ್ರವಲ್ಲದೆ ದೇಶವನ್ನು ಆವರಿಸಬೇಕು, ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಬಿಟ್ಟುಕೊಡಬೇಕು ಎಂದು ಅವರು ಸಲಹೆ ನೀಡಿದರು.

ಕುಲಾಂತರಿ ಬೆಳೆಗಳಿಗೆ ಅವಕಾಶ ನೀಡದಂತೆ ಸರ್ಕಾರಗಳ ಮೇಲೆ ಒತ್ತಡ ತರಲು ರೈತರು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ‘ಸತ್ಯಾಗ್ರಹ’ ಆರಂಭಿಸಿದ ಕೃಷಿ ವಿಜ್ಞಾನಿ ಡಾ.ಮಂಜುನಾಥ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಬಯೋ ಟೆಕ್ನಾಲಜಿ ಹಾಗೂ ಕುಲಾಂತರಿ ತಳಿಗಳ ಸಂಶೋಧನೆಗೆ ಸರ್ಕಾರ ನೆರವು ನೀಡುವುದನ್ನು ನಿಲ್ಲಿಸಬೇಕು. ಕಾರ್ಪೊರೇಟ್ ಕಂಪನಿಗಳು ಇಂತಹ ಕಾರ್ಯಗಳಿಗೆ ಹಣಕಾಸಿನ ನೆರವು ನೀಡದಂತೆ ತಡೆಯೊಡ್ಡಬೇಕು. ಕುಲಾಂತರಿ ತಳಿಗಳ ಅಭಿವೃದ್ದಿ ಕುರಿತು ಶಿಕ್ಷಣ, ಸಂಶೋಧನೆ, ಹಾಗೂ ವಿಸ್ತರಣೆಗೆ ಬಹುರಾಷ್ಟ್ರೀಯ ಕಂಪನಿಗಳು ಹಣ ನೀಡುವುದನ್ನು ನಿಷೇಧಿಸಬೇಕು. ಬಿಯರ್ ಕಂಪನಿ ಹಾಗೂ ಐಸಿಎಆರ್‌ಗೆ ಆಗಿರುವ ಒಪ್ಪಂದ ತಕ್ಷಣವೇ ರದ್ದುಪಡಿಸಬೇಕು. ಪಂಚಾಯತ್ ರಾಜ್ ಸಂಸ್ಥೆಗಳ ಮೂಲಕ ಸಹಜ ಬೇಸಾಯಕ್ಕೆ ಸರ್ಕಾರ ನೆರವು ನೀಡಬೇಕು ಎಂದು ಆಗ್ರಹಿಸಲಾಯಿತು.

ಈ ನಿರ್ಣಯಗಳ ಜಾರಿಗೆ ಪ್ರತಿ ಜಿಲ್ಲೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ತೀರ್ಮಾನ ಕೈಗೊಂಡ ಸಭೆಯು, ಆಯಾ ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು ಹಾಗು ರಾಜಕೀಯ ಮುಖಂಡರ ಸಭೆಯನ್ನು ಪಕ್ಷಾತೀತವಾಗಿ ಕರೆದು ಕುಲಾಂತರಿ ತಳಿಯ ಆಹಾರ ತಿರಸ್ಕರಿಸುವ ಕುರಿತು ನಿರ್ಣಯಿಸಬೇಕು. ಸರ್ಕಾರಗಳ ಗಮನ ಸೆಳೆದು ಕುಲಾಂತರಿ ತಳಿ ಆಹಾರ, ದೇಶ ಪ್ರವೇಶಿಸುವುದನ್ನ ತಡೆಯುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಲು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ರೈತ ಸಂಘಟನೆಗಳು ಪ್ರಗತಿಪರ ಸಂಘಟನೆಗಳು ಹಾಗು ನಾಗರಿಕ ಸಮೂಹ ತೀರ್ಮಾನಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT