ಹೈಕೋರ್ಟ್ 
ರಾಜ್ಯ

ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ!

ಆರೋಪಿಗಳು ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ಮಾಡಿದ್ದು, 8,000 ಕೋಟಿ ರೂ. ಗೂ ಅಧಿಕ ಲಾಭ ಪಡೆದಿದ್ದಾರೆ ಎಂದು ಆರೋಪಿಸಿ 'ಜನಾಧಿಕಾರ ಸಂಘರ್ಷ ಪರಿಷತ್' (ಜೆಎಸ್‌ಪಿ) ಸಹ-ಸಂಸ್ಥಾಪಕ ಆದರ್ಶ್ ಆರ್ ಅಯ್ಯರ್ ಅವರು ದೂರು ದಾಖಲಿಸಿದ್ದರು.

ಬೆಂಗಳೂರು: ಈಗ ರದ್ದಾಗಿರುವ ಚುನಾವಣಾ ಬಾಂಡ್‌ಗಳ ಮೂಲಕ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರ ನಾಯಕರ ವಿರುದ್ಧ ತನಿಖೆಗೆ ಹೈಕೋರ್ಟ್ ಸೋಮವಾರ ತಡೆ ನೀಡಿದೆ.

ಎಫ್ ಐಆರ್ ನಲ್ಲಿ ತನ್ನ ಹೆಸರಿರುವುದನ್ನು ಪ್ರಶ್ನಿಸಿ ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಮಧ್ಯಂತರ ಆದೇಶ ಪ್ರಕಟಿಸಿದ್ದು, ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ನಿಗದಿಪಡಿಸಿದೆ.

ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದ ದೂರಿನ ನಂತರ ವಿಶೇಷ ನ್ಯಾಯಾಲಯವೊಂದರ ನಿರ್ದೇಶನದಂತೆ ನಿರ್ಮಲಾ ಸೀತಾರಾಮನ್ ಮತ್ತಿತರರ ವಿರುದ್ಧ ಶನಿವಾರ ಕೇಸ್ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 384( ಸುಲಿಗೆಗೆ ಶಿಕ್ಷೆ) 120 ಬಿ (ಕ್ರಿಮಿನಲ್ ಪಿತೂರಿ) 34 (ಸಾಮಾನ್ಯ ಉದ್ದೇಶದೊಂದಿಗೆ ಹಲವಾರು ವ್ಯಕ್ತಿಗಳು ಮಾಡಿದ ಕಾರ್ಯಗಳು) ಅಡಿಯಲ್ಲಿ ಸೀತಾರಾಮನ್, ಇಡಿ ಅಧಿಕಾರಿಗಳು ಮತ್ತು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೆಸರು ಕೂಡಾ ಎಫ್ ಐಆರ್ ನಲ್ಲಿತ್ತು.

ಆರೋಪಿಗಳು ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ಮಾಡಿದ್ದು, 8,000 ಕೋಟಿ ರೂ. ಗೂ ಅಧಿಕ ಲಾಭ ಪಡೆದಿದ್ದಾರೆ ಎಂದು ಆರೋಪಿಸಿ 'ಜನಾಧಿಕಾರ ಸಂಘರ್ಷ ಪರಿಷತ್' (ಜೆಎಸ್‌ಪಿ) ಸಹ-ಸಂಸ್ಥಾಪಕ ಆದರ್ಶ್ ಆರ್ ಅಯ್ಯರ್ ಅವರು ದೂರು ದಾಖಲಿಸಿದ್ದರು.

ಇಡಿ ಅಧಿಕಾರಿಗಳ ನೆರವು ಮತ್ತು ಬೆಂಬಲದ ಮೂಲಕ ಸೀತಾರಾಮನ್, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿನ ಇತರ ಪದಾಧಿಕಾರಿಗಳ ಅನುಕೂಲಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಸುಲಿಗೆಗೆ ಅನುಕೂಲ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಈ ಯೋಜನೆಯನ್ನು ರದ್ದುಗೊಳಿಸಿತ್ತು. ಇದು ಸಂವಿಧಾನದ ಅಡಿಯ ಮಾಹಿತಿ ಮತ್ತು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!