ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮರಕ್ಕೆ ಬೈಕ್ ಡಿಕ್ಕಿ: ಇಬ್ಬರ ಸಾವು

ಇಬ್ಬರೂ ಬಿಇಎಲ್‌ನ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು.

ಅಪಘಾತ (ಸಂಗ್ರಹ ಚಿತ್ರ)
Manjula VN
Updated On : 1 Apr 2025, 12:46 pm

ಬೆಂಗಳೂರು: ರಂಜಾನ್ ಹಬ್ಬಕ್ಕೆ ಬಟ್ಟೆ ಖರೀದಿಸಿ ಮನೆಗೆ ಮರಳುವಾಗ ಬೈಕ್‌ ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಅಸ್ಸಾಂ ಮೂಲದ ವಿಜಯ್ (25), ಮೇಘಾಲಯದ ಆತನ ಸ್ನೇಹಿತ ಸುಹೈಲ್ (20) ಎಂದು ಗುರ್ತಿಸಲಾಗಿದೆ.

ಇಬ್ಬರೂ ಬಿಇಎಲ್‌ನ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಭಾನುವಾರ ರಾತ್ರಿ ಶಾಪಿಂಗ್‌ಗೆ ಹೋದವರು ನಸುಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಮಾರ್ಗೆ ಮಧ್ಯೆ ಅಪಘಾತ ಸಂಭವಿಸಿದೆ.

Advertisement

Advertisement

ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ವಿಜಯ್ ಮೃತಪ್ಟಿದ್ದಾನೆಂದು ವೈದ್ಯರು ಘೋಷಿಸಿದ್ದರು. ಈ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಹೇಲ್ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement