ಸಿಎಂ ಸಿದ್ದರಾಮಯ್ಯ  
ರಾಜ್ಯ

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ

ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಇಡಿ ಮಂಗಳವಾರ ತಕರಾರು ಅರ್ಜಿಯನ್ನು ಸಲ್ಲಿಸಿದೆ.

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜಾರಿ ನಿರ್ದೇಶನಾಲಯ(ಇಡಿ) ಪ್ರಶ್ನಿಸಿದೆ.

ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಇಡಿ ಮಂಗಳವಾರ ತಕರಾರು ಅರ್ಜಿಯನ್ನು ಸಲ್ಲಿಸಿದೆ.

ಕೇಂದ್ರ ತನಿಖಾ ಸಂಸ್ಥೆಯು ತನ್ನ ಅರ್ಜಿಯಲ್ಲಿ PMLA-2002ರ ಉದ್ದೇಶ ಮತ್ತು ಕಾರಣಗಳನ್ನು ಉಲ್ಲೇಖಿಸಿದೆ, "ಹಣ ವರ್ಗಾವಣೆಯು ದೇಶಗಳ ಹಣಕಾಸು ವ್ಯವಸ್ಥೆಗಳಿಗೆ ಮಾತ್ರವಲ್ಲದೆ ಅವುಗಳ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೂ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದಿದೆ.

ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿಗಳಿವೆ. ನಮ್ಮ ತನಿಖೆಯಲ್ಲಿ ಅವರ ತಪ್ಪುಗಳು ಸಾಬೀತಾಗಿವೆ. ಹೀಗಿದ್ದರೂ ಅವರು ಯಾವ ತಪ್ಪು ಮಾಡಿಲ್ಲ ಎನ್ನಲಾಗಿದೆ. ಯಾವ ತಪ್ಪು ಮಾಡಿಲ್ಲ ಎಂದು ಹೇಳಿರುವುದು ಸರಿಯಲ್ಲ. ಹೀಗಾಗಿ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಬೇಕು ಎಂದು ಇಡಿ ಮನವಿ ಮಾಡಿದೆ.

ಇಡಿಯ ಈ ತಕರಾರು ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ನ್ಯಾಯಾಲಯ ನಿರ್ಧರಿಸುತ್ತದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಹೇಳಿ ಬಿ ರಿಪೋರ್ಟ್ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ