ಬೈಕ್ ಟ್ಯಾಕ್ಸಿ 
ರಾಜ್ಯ

ಆರು ವಾರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ರದ್ದುಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ರದ್ದಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬೆಂಗಳೂರು: ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸಲು ಕರ್ನಾಟಕ ಹೈಕೋರ್ಟ್ ಓಲಾ, ಉಬರ್ ಮತ್ತು ರ‍್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿದೆ. ಆರು ವಾರಗಳ ನಂತರ, ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ರದ್ದಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರು ಬುಧವಾರ ಈ ಆದೇಶ ಹೊರಡಿಸಿದ್ದಾರೆ.

ಮೋಟಾರು ವಾಹನ ಕಾಯ್ದೆ, 1988 ರ ಸೆಕ್ಷನ್ 93 ಮತ್ತು ಅದರ ಅಡಿಯಲ್ಲಿರುವ ನಿಯಮಗಳ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದ ಹೊರತು, ಅರ್ಜಿದಾರರು ಬೈಕ್ ಟ್ಯಾಕ್ಸಿ ಸೇವೆ ನೀಡಲು ಸಾಧ್ಯವಿಲ್ಲ ಮತ್ತು ಈ ಸಂಬಂಧ ಕರ್ನಾಟಕ ಸಾರಿಗೆ ಇಲಾಖೆಗೆ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ನಿರ್ದೇಶನ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಈ ಅರ್ಜಿಗಳ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯ ನೀಡಿದ ಮಧ್ಯಂತರ ಆದೇಶದ ಆಧಾರದ ಮೇಲೆ ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಅಂಶದ ಬಗ್ಗೆ ನ್ಯಾಯಾಲಯದ ಗಮನ ಸೆಳೆದಾಗ, ನ್ಯಾಯಾಲಯವು ಇಂದಿನಿಂದ ಆರು ವಾರಗಳ ಕಾಲ ಕಾರ್ಯನಿರ್ವಹಿಸಲು ಅವರಿಗೆ ಅನುಮತಿ ನೀಡಿದೆ ಮತ್ತು ಆರು ವಾರಗಳ ನಂತರ ತಮ್ಮ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2013ರ ಅತ್ಯಾಚಾರ ಪ್ರಕರಣ: ‘Tehelka’ ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!

FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ': Shashi Tharoor

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!

'ನೋಡೋರ್ ಗಿಂತ ಆಡೋರ್ ಸಂಖ್ಯೆನೇ ಜಾಸ್ತಿ ಇದೆ': ಪ್ರೇಕ್ಷಕರೇ ಇಲ್ಲದೇ ಟೀಕೆಗೆ ಗುರಿಯಾದ Pakistan vs West Indies ಟೆಸ್ಟ್ ಪಂದ್ಯ!

ಯೆನ್ ರಕ್ಷಣೆಗೆ ಅಮೇರಿಕಾ-ಜಪಾನ್ ಜಂಟಿ ಕಾರ್ಯಾಚರಣೆ, ಜಾಗತಿಕ ಹಣಕಾಸು ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ (ಹಣಕ್ಲಾಸು)