ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: ಮಸ್ಕಿ ಕಾಂಗ್ರೆಸ್​ ಶಾಸಕನ ಪುತ್ರ, ಸಹೋದರನಿಂದ ಮೊಲಗಳ ಬೇಟೆ- ಮೆರವಣಿಗೆ; ಕೇಸ್ ದಾಖಲು

ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮಸ್ಕಿ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರುವಿಹಾಳ ಪುತ್ರ ಮತ್ತು ಸಹೋದರ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಿರುವ ವಿಡಿಯೋ ವೈರಲ್​ ಆಗಿದೆ

ರಾಯಚೂರು: ಬೇಟೆಯಾಡಿದ ಕಾಡು ಮೊಲಗಳೊಂದಿಗೆ ಸಾರ್ವಜನಿಕವಾಗಿ ಮೆರವಣಿಗೆ ನಡೆಸುತ್ತಿರುವ ವೀಡಿಯೊಗಳು ಕಾಣಿಸಿಕೊಂಡ ನಂತರ ಕಾಂಗ್ರೆಸ್ ಶಾಸಕ ಬಸನಗೌಡ ತುರುವಿಹಾಳ್ ಅವರ ಪುತ್ರ ಸತೀಶ್ ಗೌಡ, ಅವರ ಸಹೋದರ ಸೇರಿದಂತೆ ಹಲವರ ರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮಸ್ಕಿ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರ್ವಿಹಾಳ ಪುತ್ರ ಮತ್ತು ಸಹೋದರ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಿರುವ ವಿಡಿಯೋ ವೈರಲ್​ ಆಗಿದೆ. ಈ ಮೂಲಕ ಶಾಸಕರ ಪುತ್ರ ಸತೀಶ್​​ಗೌಡ, ಸಹೋದರ ಸಿದ್ದನಗೌಡ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ.

ಶಾಸಕರ ಪುತ್ರ, ಸಹೋದರನ ನೇತೃತ್ವದಲ್ಲಿ ಮೊಲಗಳನ್ನು ಬೇಟೆಯಾಡಲಾಗಿದೆ. ಬಳಿಕ, ಮೊಲಗಳ ಕಳೆಬರಹವನ್ನು ಕಟ್ಟಿಗೆಗಳಿಗೆ ಕಟ್ಟಿ ಸಿಂಧನೂರು ತಾಲೂಕಿನ ‌ತುರ್ವಿಹಾಳ ಪಟ್ಟಣದಲ್ಲಿ ಮೆರವಣಿಗೆ ಮಾಡಲಾಗಿದೆ. ಅಲ್ಲದೇ, ಖಡ್ಗ ಮತ್ತು ಕೊಡಲಿ ಪ್ರದರ್ಶನ ಮಾಡಲಾಗಿದೆ.

ಘಟನೆ ಸಂಬಂಧ ಮಸ್ಕಿ ಕಾಂಗ್ರೆಸ್ ಶಾಸಕ ಬಸನಗೌಡ ತುರ್ವಿಹಾಳ ಅವರ ಪುತ್ರ ಸತೀಶ್ ಗೌಡ ಹಾಗೂ ಸಹೋದರ ಸಿದ್ದನಗೌಡ ಹಾಗೂ ದುರ್ಗೇಶ್ ಸೇರಿ ಹಲವರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.

ಘಟನೆ ಸಂಬಂಧ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾತನಾಡಿ, ಮೊಲಗಳನ್ನು ಮೆರವಣಿಗೆ ಮಾಡುವ ವಿಡಿಯೋ ವೈರಲ್ ಆಗಿದೆ. ಈಗಾಗಲೇ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲಿ, ಪ್ರಕರಣ ದಾಖಲಾದ ಬಳಿಕ ಮುಂದಿನ ಹಂತದಲ್ಲಿ ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT