ಕಾರಿಗೆ ಐರಾವತ ಬಸ್ ಡಿಕ್ಕಿ 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಭೀಕರ ಅಪಘಾತ; ಕಾರಿಗೆ ಐರಾವತ ಬಸ್ ಡಿಕ್ಕಿ; ಒಂದೇ ಕುಟುಂಬದ ನಾಲ್ವರ ಸಾವು

ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್ಪ್ರೆಸ್‌ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ಪ್ರೆಸ್ ವೇಗೆ ತಿರುಗಿಸಿದ್ದಾನೆ.

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ.

ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್ಪ್ರೆಸ್‌ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ಪ್ರೆಸ್ ವೇಗೆ ತಿರುಗಿಸಿದ್ದಾನೆ. ಇದೇ ವೇಳೆ ಹಿಂದಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಬಂದಿದ್ದು, ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸೋದರಮಾವನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಜೆಪಿ ನಗರದವರೆಂದು ಗುರುತಿಸಲಾಗಿದೆ, 52 ವರ್ಷದ ಸತ್ಯಾನಂದ ರಾಜೇ ಅರಸ್, ಪತ್ನಿ ನಿಶ್ಚಿತಾ , ಚಂದ್ರು ಮತ್ತು ಸುವೇದಿನಿ ರಾಣಿ ಎಂದು ಗುರುತಿಸಲಾಗಿದೆ, ಸ್ಥಳಕ್ಕೆ ದಕ್ಷಿಣ ವಲಯ ಐಜಿ ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT