ಸಂಗ್ರಹ ಚಿತ್ರ 
ರಾಜ್ಯ

ಇನ್ನೂ ಎರಡು ದಿನ ಮನೆಯಿಂದ ಹೊರಬರುವ ಮುನ್ನ ಎಚ್ಚರ: ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ವಾರ್ನಿಂಗ್!

ಬೇಸಿಗೆ ಧಗೆಯಿಂದ ಹೈರಾಣಾಗಿದ್ದ ಬೆಂಗಳೂರಿನಲ್ಲಿ ಮಳೆಯ ಸಿಂಚನವಾಗಿದ್ದು ಹಲವೆಡೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ.

ಬೆಂಗಳೂರು: ಬೇಸಿಗೆ ಧಗೆಯಿಂದ ಹೈರಾಣಾಗಿದ್ದ ಬೆಂಗಳೂರಿನಲ್ಲಿ ಮಳೆಯ ಸಿಂಚನವಾಗಿದ್ದು ಹಲವೆಡೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ ಹಲವೆಡೆ ಮರಗಳು ಧರೆಗುರುಳಿದ್ದು ಮನೆಗಳು, ಕಾರುಗಳು ಜಖಂಗೊಂಡಿವೆ. ಇನ್ನು ರಸ್ತೆಯಲ್ಲಿ ನೀರು ನಿಂತಿದ್ದರಿಂದ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ ತಂಪೆರೆದಿದ್ದಾನೆ. ಇಡೀ ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ಬೆಳಗ್ಗೆಯಷ್ಟೇ ಹವಾಮಾನ ಇಲಾಖೆ ಬೆಂಗಳೂರು ನಗರಕ್ಕೆ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಎಂದು ವರದಿ ನೀಡಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನಾದ್ಯಂತ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನ ಪ್ರಮುಖ ಪ್ರದೇಶಗಳಾದ ವಿಧಾನಸೌಧ, ಶಿವಾಜಿ ನಗರ, ಹೆಚ್ಎಸ್ ಆರ್ ಲೇಔಟ್, ಕೆಆರ್ ಮಾರುಕಟ್ಟೆ, ಚಾಮರಾಜಪೇಟೆ, ಬಸವನಗುಡಿ, ಜಯನಗರ, ಒಆರ್ ಆರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ.

IMD ಯೆಲ್ಲೋ ಅಲರ್ಟ್ ಘೋಷಣೆ

2025ರ ಏಪ್ರಿಲ್ 3ರಂದು ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ ನೀಡಿತ್ತು. ಇದೀಗ ಮತ್ತೆರೆಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

ಚಂಡಮಾರುತ ಕಾರಣ?

ಇನ್ನು ನಗರದಲ್ಲಿನ ದಿಢೀರ್ ಮಳೆಗೆ ಚಂಡಮಾರುತ ಕಾರಣ ಎಂದು ಹೇಳಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಇದೆ. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ಬದಲಾಗಬಹುದು. ಇದರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಮಿಂಚು ಮತ್ತು ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT