ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳ್ಳಂಬೆಳಗ್ಗೆಯೇ ಬೆಂಗಳೂರಲ್ಲಿ ತಂಪೆರೆದ ವರುಣ: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಬೆಂಗಳೂರಿನ ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ ತಂಪೆರೆದಿದ್ದಾನೆ. ಇಡೀ ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರು: ನಗರದ ಕೆಲ ಭಾಗಗಳಲ್ಲಿ ಬೆಳಗ್ಗೆಯೇ ತುಂತುರು ಮಳೆಯಾಗುತ್ತಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದ್ಧು, ಕೆಲ ಗಂಟೆಗಳಲ್ಲೇ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ ತಂಪೆರೆದಿದ್ದಾನೆ. ಇಡೀ ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ದಾಸರಹಳ್ಳಿ, ಪೀಣ್ಯ, ಎಂಟನೇ ಮೈಲಿ ಸುತ್ತಮುತ್ತ ತುಂತುರು ಮಳೆಯಾಗಿದೆ.

ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮತ್ತು ನಾಳೆ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆಯ ಬಿಸಿಲ ಬೇಗೆಗೆ ಜನ ಬಸವಳಿದು ಹೋಗಿದ್ದಾರೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ‌ಯಾಗುವ ಸಾಧ್ಯತೆ ಇದೆ. ಹಾಸನ, ಮೈಸೂರು, ಚಿತ್ರದುರ್ಗ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ.

ಹಾಸನ, ಮೈಸೂರು, ಚಿತ್ರದುರ್ಗ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!