ಅಂಗಾಂಗ ದಾನ 
ರಾಜ್ಯ

ಬೆಂಗಳೂರು: ಅಪಘಾತದಿಂದ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ; 8 ಮಂದಿಗೆ ಜೀವ ನೀಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಭೀಕರ ರಸ್ತೆ ಅಪಘಾತದಲ್ಲಿ 28 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಆತನ ಮಿದುಳು ನಿಷ್ಕ್ರಿಯಗೊಂಡಿತ್ತು.

ಬೆಂಗಳೂರು: ಅಪಘಾತವೊಂದರಲ್ಲಿ ಮಗನನ್ನು ಕಳೆದುಕೊಂಡ ಪೋಷಕರು ಅತೀವ ದುಃಖದಲ್ಲಿಯೂ ತಮ್ಮ ಮಗನ ಅಂಗಾಂಗ ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಭೀಕರ ರಸ್ತೆ ಅಪಘಾತದಲ್ಲಿ 28 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಆತನ ಮಿದುಳು ನಿಷ್ಕ್ರಿಯಗೊಂಡಿತ್ತು. ಬಳಿಕ ವೈದ್ಯರು ಆಂಗಾಂಗ ದಾನದ ಕುರಿತು ಕುಟುಂಬಕ್ಕೆ ಸಲಹೆ ನೀಡಿದ್ದಾರೆ. ಇದಕ್ಕೆ ಕುಟುಂಬ ಒಪ್ಪಿಗೆ ನೀಡಿದೆ.

ಬಹುಅಂಗ ಮರುಪಡೆಯುವಿಕೆಯ ಸಂಪೂರ್ಣ ಪ್ರಕ್ರಿಯೆಯು ಸುಮಾರು 5 ಗಂಟೆಗಳನ್ನು ತೆಗೆದುಕೊಂಡಿತು. ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಎಂಟು ಮಂದಿಗೆ ಅಂಗಾಂಗಗಳನ್ನು ಜೋಡಣೆ ಮಾಡಲಾಗಿದ್ದು, 8 ಮಂದಿಗೆ ಜೀವ ನೀಡಿದೆ. ಎರಡೂ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ, ಎರಡೂ ಶ್ವಾಸಕೋಶಗಳನ್ನು ಮಣಿಪಾಲ್ ಆಸ್ಪತ್ರೆಗೆ, ಯಕೃತ್ತನ್ನು ಎಚ್‌ಸಿಜಿ ಆಸ್ಪತ್ರೆಗೆ, ಹೃದಯ ಕವಾಟಗಳನ್ನು ಮಣಿಪಾಲ್ ಆಸ್ಪತ್ರೆಗೆ ಮತ್ತು ಒಂದು ಮೂತ್ರಪಿಂಡವನ್ನು ರಾಮಯ್ಯ ಆಸ್ಪತ್ರೆಗೆ ದಾನ ಮಾಡಲಾಯಿತು ಎಂದು ಆಸ್ಪತ್ರೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಏಳು ವರ್ಷಗಳಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ 41 ವರ್ಷದ ಮಹಿಳೆ ಬಳಲುತ್ತಿದ್ದು, ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಎರಡನೇ ಮೂತ್ರಪಿಂಡವನ್ನು ಕಸಿ ಮಾಡಲಾಯಿತು.

ಶ್ವಾಸಕೋಶ ಮತ್ತು ಹೃದಯ ಕವಾಟಗಳನ್ನು ತಕ್ಷಣವೇ ಹಸಿರು ಕಾರಿಡಾರ್ ಮೂಲಕ ಫೋರ್ಟಿಸ್ ಆಸ್ಪತ್ರೆ, ಮತ್ತು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಯಿತು ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT