ಬೆಂಗಳೂರು: ಪೊಲೀಸರು ತನ್ನ ಮೇಲೆ ಹಲ್ಲೆ ನಡೆಸಿ, ಕಿರುಕುಳ ನೀಡುತ್ತಿದ್ದಾರೆ. ನನಗೆ ನ್ಯಾಯ ಬೇಕೆಂದು ಆಗ್ರಹಿಸಿ ಯುವಕನೋರ್ವ ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ಬುಧವಾರ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ನಿವಾಸಿ ಶೇಖರ್ (28) ಎಂದು ಗುರ್ತಿಸಲಾಗಿದೆ.
ಚನ್ನರಾಯಪಟ್ಟಣ ಠಾಣೆ ಪೊಲೀಸರು ಹೊಡೆದು ಕಿರುಕುಳ ನೀಡಿದ್ದು, ನನಗೆ ನ್ಯಾಯಬೇಕೆಂದು ಯುವಕ ಆಗ್ರಹಿಸಿದ್ದಾರೆ. ಇದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಜೆ 5 ಗಂಟೆ ಸುಮಾರಿಗೆ ಶೇಖರ್ ಸೌಧದ ಮುಂದೆ ವಿಷ ಸೇವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಆತನನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಯುವ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.