ಪಂಚಮಸಾಲಿ ಹೋರಾಟ 
ರಾಜ್ಯ

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಲಾಠಿ ಚಾರ್ಜ್ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಕಾಲ ಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದೆ.

ಧಾರವಾಡ: ಕಳೆದ ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣವನ್ನು ಧಾರವಾಡ ಹೈಕೋರ್ಟ್ ಪೀಠ ಶುಕ್ರವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಲಾಠಿ ಚಾರ್ಜ್ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​, ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಲಾಠಿ ಚಾರ್ಜ್ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಕಾಲ ಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದೆ.

2ಎ ಮೀಸಲಾತಿಗಾಗಿ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ್ದ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರದ ನಡೆ ಖಂಡಿಸಿ ಬಿಜೆಪಿ ಹಾಗೂ ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ ನಡೆಸಿದ್ದರು ಮತ್ತು ತಮ್ಮ ಸಮುದಾಯದ ಜನರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳು ಅಮಾನತು ಮಾಡುವಂತೆ ಆಗ್ರಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್