ಮಿನಿ ಬಸ್-ಲಾರಿ ಡಿಕ್ಕಿ  
ರಾಜ್ಯ

ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ: ಐವರು ಸಾವು

ಕಲಬುರಗಿಯ ಖಾಜಾ ಬಂದೇನವಾಜ್​ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್​​ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವಿಗೀಡಾಗಿದ್ದಾರೆ.

ಕಲಬುರಗಿ: ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಇಂದು ಶನಿವಾರ ನಸುಕಿನ ಜಾವ ಸಂಭವಿಸಿದೆ.

ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.

ಕಲಬುರಗಿಯ ಖಾಜಾ ಬಂದೇನವಾಜ್​ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್​​ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವಿಗೀಡಾಗಿದ್ದಾರೆ. 11 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ಬೆಂಗಳೂರು: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ; Oyo ರೂಂನಲ್ಲಿ ಮಹಿಳೆ ಆತ್ಮಹತ್ಯೆ!

ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆಯಲ್ಲಿ, ಕೈ ಮುಗಿದು ಕುಳಿತ ನಿತೀಶ್ ಕುಮಾರ್; ವ್ಯಾಪಕ ಟೀಕೆ!: Video

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

SCROLL FOR NEXT