ಸುದ್ದಿ ಮುಖ್ಯಾಂಶಗಳು online desk
ರಾಜ್ಯ

News headlines 05-04-2025 | ಸರ್ಕಾರದ ವಿರುದ್ಧ ಮತ್ತೆ ಗವರ್ನರ್ ಗರಂ; ಡೀಸೆಲ್ ಬೆಲೆ ಏರಿಕೆ: ಏ.14 ರಂದು ಲಾರಿ ಚಾಲಕರ ಮುಷ್ಕರ, ಕಾರ್ಯಕರ್ತನ ಸಾವು: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ, ಅಪಘಾತ: 5 ಮಂದಿ ಸಾವು

ಡೀಸೆಲ್ ಬೆಲೆ ಏರಿಕೆಗೆ ವಿರೋಧ ಏ.14 ರಂದು ಲಾರಿ ಚಾಲಕರ ಮುಷ್ಕರ

ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಪರಿಣಾಮ ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಏ.14ರ ಮಧ್ಯ ರಾತ್ರಿಯಿಂದ 5 ಲಕ್ಷ ಲಾರಿಗಳು ಸಂಚಾರ ನಿಲ್ಲಿಸಲಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಹಾಗಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ, ರಾಜ್ಯ ಸರ್ಕಾರ ಡೀಸೆಲ್‌ ಮೇಲಿನ ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿಆರ್ ಷಣ್ಮುಗಪ್ಪ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಪಕ್ಷದ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ಹೆಸರಿಸಬೇಕೆಂದು ಒತ್ತಾಯಿಸಿ ಬಿಜೆಪಿ ಶನಿವಾರ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಾವಿನ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ. ಕುಶಾಲನಗರ ಮಾತ್ರವಲ್ಲದೇ ಬಿಜೆಪಿಯಿಂದ ಇತರ ಕೆಲವು ಸ್ಥಳಗಳಲ್ಲಿಯೂ ಪ್ರತಿಭಟನೆಗಳು ನಡೆದಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಕುಶಾಲನಗರದಲ್ಲಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ಬಂಧಿಸಿ ಬಸ್‌ನಲ್ಲಿ ಕರೆದೊಯ್ದರು. ಬಿಜೆಪಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಅವರ ಡಿಮ್ಯಾಂಡ್ ಗೆಲ್ಲಾ ನಾವು ಉತ್ತರ ಕೊಡೋಕೆ ಆಗಲ್ಲ. ಶಾಸಕರಾದ ಪೊನ್ನಣ್ಣ, ಮಂತರ್ ಗೌಡ ಅವರ ಹೆಸರನ್ನು ಎಫ್ ಐಆರ್ ನಲ್ಲಿ ಸೇರಿಸಬೇಕು ಎನ್ನುವ ಬಿಜೆಪಿ ನಾಯಕರ ಬೇಡಿಕೆ ಒಪ್ಪಲು ಆಗದು, ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ .

ಸರ್ಕಾರದ ವಿರುದ್ಧ ಮತ್ತೆ ಗರ್ವರ್ನರ್ ಗರಂ

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಕ ವಿಚಾರದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸರಕಾರದ ವಿರುದ್ಧ ಸಿಡಿಮಿಡಿಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೇರವಾಗಿ ಪತ್ರ ಬರೆದು ಆಕ್ರೋಶ ಹೊರಹಾಕಿದ್ದಾರೆ. ಗದಗದ ಗ್ರಾಮೀಣಾಭಿವೃದ್ದಿ ವಿವಿ ಕುಲಪತಿ ನೇಮಕ ಅಧಿಕಾರವನ್ನು ರಾಜ್ಯಪಾಲರ ಬದಲಿಗೆ ಸಿಎಂಗೆ ನೀಡುವ ಸಂಬಂಧ ತಿದ್ದುಪಡಿ ವಿಧೇಯಕ ರೂಪಿಸಲಾಗಿದೆ. ಆದರೆ, ಈ ಕಾನೂನು ತಿದ್ದುಪಡಿ ಬಗ್ಗೆ ಆಕ್ಷೇಪ ಎತ್ತಿರುವ ರಾಜ್ಯಪಾಲರು ಸ್ಪಷ್ಟನೆ ಬಯಸಿ ವಾಪಸ್‌ ಕಳಿಸಿದ್ದು, ಇನ್ನೂ ಒಪ್ಪಿಗೆ ನೀಡಿಲ್ಲ. ಹಾಗಾಗಿ, 2024ರ ಮೇ 25ರಿಂದ ಖಾಲಿ ಇರುವ ವಿವಿ ಕುಲಪತಿ ಹುದ್ದೆ ನೇಮಕಕ್ಕೆ ಸರಕಾರ ಆಸಕ್ತಿ ತೋರಿಲ್ಲ. ಇದು ರಾಜ್ಯಪಾಲರನ್ನು ಕೆರಳುವಂತೆ ಮಾಡಿದೆ. ಗದಗದ ಆರ್‌ಡಿಪಿಆರ್‌ ವಿವಿ ಕುಲಪತಿ ನೇಮಕ ಸಂಬಂಧ ಅರ್ಜಿ ಆಹ್ವಾನಿಸಲು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚಿಸಿ ತಾವು ಹಲವು ಬಾರಿ ಪತ್ರ ಬರೆದಿರುವುದನ್ನು ಉಲ್ಲೇಖಿಸಿದ್ದಾರೆ.

ಅಪಘಾತ: 5 ಮಂದಿ ಸಾವು

ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಇಂದು ನಡೆದಿದೆ. ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ತೆರಳುವಾಗ ಈ ದುರಂತ ನಡೆದಿದೆ. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ. ಬ್ಯಾಡ್ಮಿಂಟನ್

ಬ್ಯಾಡ್ಮಿಂಟನ್: ತರಬೇತಿಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಕೋಚ್ ಬಂಧನ

ಬ್ಯಾಡ್ಮಿಂಟನ್ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ಕೋಚ್ ವೊಬ್ಬರನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. 16 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಮಿಳುನಾಡು ಮೂಲದ ಬ್ಯಾಡ್ಮಿಂಟನ್ ಕೋಚ್ ಸುರೇಶ್ ಬಾಲಾಜಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಸುರೇಶ್ ಬಾಲಾಜಿ ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT