ರಾಜ್ಯ

ದಾವಣಗೆರೆ: ಅಪ್ರಾಪ್ತ ಬಾಲಕರ ಮೇಲೆ ಅಮಾನುಷ ಕೃತ್ಯ; ಮರಕ್ಕೆ ಕಟ್ಟಿ ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ!

ಅಪ್ರಾಪ್ತ ಬಾಲಕರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು ಅಷ್ಟಕ್ಕೆ ಸುಮ್ಮನಾಗದೇ ಕಿರಾತಕರು ಬಾಲಕರ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ: ಇಬ್ಬರು ಅಪ್ರಾಪ್ತ ಬಾಲಕರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು ಅಷ್ಟಕ್ಕೆ ಸುಮ್ಮನಾಗದೇ ಕಿರಾತಕರು ಬಾಲಕರ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ನಲ್ಲೂರಿನ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದೇ ಈ ಘಟನೆ ನಡೆದಿತ್ತು. ಈ ಸಂಬಂಧ ವಿಡಿಯೋ ವೈರಲ್ ಆದ ಬಳಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳತನದ ಆರೋಪ ಮಾಡಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿದ್ದ ಯುವಕರು ಅವರ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು 9 ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಕ್ಕಿ-ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಸುಭಾಷ್, ಲಕ್ಕಿ , ದರ್ಶನ್ , ಪರಶು , ಶಿವದರ್ಶನ್ ಸೇರಿದಂತೆ ಹತ್ತು ಯುವಕರು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT