ಅಪಘಾತಕ್ಕೀಡಾದ ಕಾರು 
ರಾಜ್ಯ

ಹುಬ್ಬಳ್ಳಿ: ಡಿವೈಡರ್‌ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸಾವು

ಮೃತರನ್ನು ಸುಜಾತಾ ಹಿರೇಮಠ(60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72) ಸಂಪತ್​ ಕುಮಾರಿ (63) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಭಾನುವಾರ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಸುಜಾತಾ ಹಿರೇಮಠ(60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72) ಸಂಪತ್​ ಕುಮಾರಿ (63) ಎಂದು ಗುರುತಿಸಲಾಗಿದೆ.

ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ತಿಳಿದುಬಂದಿದ್ದು, ಅಪಘಾತದಲ್ಲಿ ಗಾಯಗೊಂಡ ಕಾರು ಚಾಲಕ ವಿರೇಶ್​ ಹಿರೇಮಠ(65) ಎಂಬುವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿಯಿಂದ ಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಸಂಪತ್​ ಕುಮಾರಿ ಮತ್ತು ವಿರೇಶ್​ ಹಿರೇಮಠ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಪತ್​ ಕುಮಾರಿ ಮೃತಪಟ್ಟಿದ್ದಾರೆ. ವಿರೇಶ್​ ಹಿರೇಮಠ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?