ಸಂಜನಾ ಗಲ್ರಾನಿ 
ರಾಜ್ಯ

ನಟಿ ಸಂಜನಾ ಗಲ್ರಾನಿಗೆ ವಂಚನೆ: ಅಪರಾಧಿ​ಗೆ 61 ಲಕ್ಷ ರೂ ದಂಡ, 6 ತಿಂಗಳು ಜೈಲು ಶಿಕ್ಷೆ

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಹಣ ವಂಚಿಸಿದ ಪ್ರಕರಣಕ್ಕ ಸಂಬಂಧಿಸಿದಂತೆ ಅಪರಾಧಿ ರಾಹುಲ್ ತೋನ್ಸೆಗೆ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿ 33ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ದಂಡದ ಮೊತ್ತದಲ್ಲಿ 10 ಸಾವಿರ ಕೋರ್ಟ್ ಶುಲ್ಕ ಕಡಿತ ಮಾಡಿ ಉಳಿದ ಹಣ ಸಂಜನಾಗೆ ನೀಡಬೇಕು. ನಿಗದಿತ ಸಮಯದಲ್ಲಿ ದಂಡ ಪಾವತಿಸಿದರೆ ಆರು ತಿಂಗಳ ಶಿಕ್ಷೆ ಮಾಫಿ ಮಾಡಲಾಗುವುದು. ಒಂದು ವೇಳೆ ಪರಿಹಾರ ಮೊತ್ತ ನೀಡದೆ ಜೈಲು ಶಿಕ್ಷೆ ಅನುಭವಿಸಿದರೂ ದೂರುದಾರೆಗೆ ಪರಿಹಾರ ಹಿಂದಿರುಗಿಸುವ ಹೊಣೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2018-19ರಲ್ಲಿ ನಡೆದ ಘಟನೆ ಇದಾಗಿದೆ. ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ರಾಹುಲ್ ಆಮಿಷವೊಡ್ಡಿದ್ದ. ಆ ಬಳಿಕ ಗಲ್ರಾನಿಯಿಂದ 45 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ.

ಈ ಸಂಬಂಧ ಇಂದಿರಾ ನಗರ ಠಾಣೆಯಲ್ಲಿ ರಾಹುಲ್ ಹಾಗೂ ಆತನ ಕುಟುಂಬದ ವಿರುದ್ಧ ಸಂಜನಾ ದೂರು ದಾಖಲು ಮಾಡಿದ್ದರು. ಈ ದೂರನ್ನು ಆಧರಿಸಿ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ಕೋರ್ಟ್​ ವಿಚಾರಣೆಯಲ್ಲಿ ರಾಹುಲ್ ತೋನ್ಸೆ ಅಪರಾಧಿ ಎಂದು ಸಾಬೀತಾಗಿದೆ. ಹೀಗಾಗಿ, ಶಿಕ್ಷೆ ವಿಧಿಸಲಾಗಿದೆ.

ರಾಹುಲ್ ದೊಡ್ಡ ಉದ್ಯಮಿಯಾಗಿದ್ದು, ಗೋವಾ ಹಾಗೂ ಕೊಲಂಬೋದಲ್ಲಿ ಕ್ಯಾಸಿನೊ ನಡೆಸುತ್ತಿದ್ದ. ಈ ಪ್ರಕರಣದಲ್ಲಿ ರಾಹುಲ್ ತಂದೆ ರಾಮಕೃಷ್ಣ, ತಾಯಿ ರಾಜೇಶ್ವರಿ ಕೂಡ ಶಾಮೀಲಾಗಿದ್ದರು ಎನ್ನಲಾಗಿತ್ತು. ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಇದಲ್ಲದೆ, ಉದ್ಯಮಿಗೆ 25 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪವೂ ಇವನ ಮೇಲೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ