ರಾಜ್ಯ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಬೆಂಗಳೂರಿನಂತಹ ದೊಡ್ಡ ನಗರಗಳಲ್ಲಿ ಈ ರೀತಿಯ ಘಟನೆಗಳು ಸಾಮಾನ್ಯ- ಜಿ ಪರಮೇಶ್ವರ

ಪೊಲೀಸರು ಮಳೆ ಮತ್ತು ಚಳಿಯನ್ನು ಲೆಕ್ಕಿಸದೆ ದಿನದ 24 ಗಂಟೆಗಳೂ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಬೆಂಗಳೂರಿನಲ್ಲಿ ಶಾಂತಿ ನೆಲೆಸಿದೆ.

ಬೆಂಗಳೂರು: ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಅಲ್ಲೊಂದು ಇಲ್ಲೊಂದು ಮಹಿಳೆಯರ ಮೇಲಿನ ದೌರ್ಜನ್ಯದಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದರೆ, ಪೊಲೀಸರ ಉಪಸ್ಥಿತಿಯಿಂದಾಗಿ ನಗರದಲ್ಲಿ ಶಾಂತಿ ನೆಲೆಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.

ಸುದ್ದಗುಂಟೆಪಾಳ್ಯದಲ್ಲಿ ನಿರ್ಜನ ಸ್ಥಳದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಂತಹ ಘಟನೆ ನಡೆದಾಗಲೆಲ್ಲಾ ಅದು ಸಾರ್ವಜನಿಕರ ಗಮನ ಸೆಳೆಯುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

'ಪೊಲೀಸರು ಮಳೆ ಮತ್ತು ಚಳಿಯನ್ನು ಲೆಕ್ಕಿಸದೆ ದಿನದ 24 ಗಂಟೆಗಳೂ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಬೆಂಗಳೂರಿನಲ್ಲಿ ಶಾಂತಿ ನೆಲೆಸಿದೆ. ಬೆಂಗಳೂರಿನಂತಹ ದೊಡ್ಡ ನಗರದಲ್ಲಿ, ಅಲ್ಲೊಂದು ಇಲ್ಲೊಂದು ಇಂತಹ ಘಟನೆಗಳು ನಡೆಯುತ್ತವೆ' ಎಂದು ಹೇಳಿದರು.

ಗಸ್ತು ಮತ್ತು ಮೇಲ್ವಿಚಾರಣಾ ವ್ಯವಸ್ಥೆಯನ್ನು ಬಲಪಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಪ್ರತಿದಿನ ಸೂಚನೆಗಳನ್ನು ನೀಡಲಾಗುತ್ತಿದೆ. ಪೊಲೀಸರು ಜಾಗರೂಕರಾಗಿರಬೇಕು, ಬೀಟ್ ವ್ಯವಸ್ಥೆಯನ್ನು ನಿಯಮಿತವಾಗಿ ಅನುಸರಿಸಬೇಕು ಮತ್ತು ಮೇಲ್ವಿಚಾರಣೆಯನ್ನು ಹೆಚ್ಚಿಸಬೇಕು. ಪ್ರತಿಯೊಂದು ಪ್ರದೇಶದಲ್ಲೂ ಶಿಸ್ತುಬದ್ಧ ಮತ್ತು ಪರಿಣಾಮಕಾರಿ ರೀತಿಯಲ್ಲಿ ಗಸ್ತು ತಿರುಗಬೇಕು ಎಂದು ಸೂಚನೆ ನೀಡಲಾಗಿದೆ.

ಪೊಲೀಸರ ಪ್ರಕಾರ, ಏಪ್ರಿಲ್ 3ರ ಬೆಳಗಿನ ಜಾವ ಇಬ್ಬರು ಮಹಿಳೆಯರು ಸದ್ದುಗುಂಟೆಪಾಳ್ಯದ ಭಾರತಿ ಲೇಔಟ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಅವರ ಬಳಿ ಬಂದ ವ್ಯಕ್ತಿಯೊಬ್ಬ ಅವರಲ್ಲಿ ಒಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಆರೋಪಿಯನ್ನು ಗುರುತಿಸಲು ಮತ್ತು ಬಂಧಿಸಲು ತನಿಖೆ ನಡೆಯುತ್ತಿದೆ ಎಂದು ಆಗ್ನೇಯ ಬೆಂಗಳೂರಿನ ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಸಾರಾ ಫಾತಿಮಾ ದೃಢಪಡಿಸಿದರು.

ಬಿಜೆಪಿಯ ನಿರಂತರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಬಿಜೆಪಿ ಈಗ ವಿರೋಧ ಪಕ್ಷದಲ್ಲಿದೆ; ಅವರಿಗೆ ನಮ್ಮ ಸರ್ಕಾರದ ಬಗ್ಗೆ ಮಾತನಾಡಲು ಬೇರೆ ಏನೂ ಇಲ್ಲ. ನಾವು ಇಲ್ಲಿಯವರೆಗೆ ಉತ್ತಮ ಆಡಳಿತ ನೀಡಿದ್ದೇವೆ ಮತ್ತು ನಾವು ಅದನ್ನು ಮುಂದುವರಿಸುತ್ತೇವೆ' ಎಂದು ಹೇಳಿದರು.

ನಮ್ಮ ಖಾತರಿ ಯೋಜನೆಗಳು ತಳಮಟ್ಟದ ಜನರಿಂದ ಸಾಕಷ್ಟು ಮೆಚ್ಚುಗೆಯನ್ನು ಗಳಿಸಿವೆ. ಸರ್ಕಾರವು ತನ್ನ ಹಣಕಾಸು ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದೆ. ಬಜೆಟ್ ಅನ್ನು ಪ್ರಶಂಸಿಸಲಾಗಿದೆ. ಕೆಲವು ನ್ಯೂನತೆಗಳಿರಬಹುದು. ಆದರೆ, ಅದನ್ನು ಪ್ರಶಂಸಿಸಲಾಗಿದೆ ಎಂದರು.

ಬಿಜೆಪಿಯ 'ಜನಾಕ್ರೋಶ ಯಾತ್ರೆ' ಕುರಿತು ಮಾತನಾಡಿದ ಪರಮೇಶ್ವರ, ಇದು ಆಡಳಿತಾರೂಢ ಸರ್ಕಾರದ ಯಶಸ್ಸಿಗೆ ಪ್ರತಿಕ್ರಿಯೆಯಾಗಿದೆ. ಬಿಜೆಪಿಗೆ ಇದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ಅವರು ಈ 'ಜನಕ್ರೋಶ ಯಾತ್ರೆ'ಯನ್ನು ನಡೆಸಿದ್ದಾರೆ' ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel