ಸಂಗ್ರಹ ಚಿತ್ರ 
ರಾಜ್ಯ

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಎಫ್‌ಐಆರ್, ಶಿಸ್ತು ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ

ಬೇಗೂರು ಪೊಲೀಸ್ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ ಘಟನೆಯ ನಂತರ ಈ ಸುತ್ತೋಲೆ ಹೊರಡಿಸಲಾಗಿದೆ.

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಎಚ್ಚರಿಕೆ ನೀಡಿದ್ದು, ಶೌಚಾಲಯ ಸ್ವಚ್ಛಗೊಳಿಸುವ ಕಾರ್ಯದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸದಂತೆ ನಿರ್ದೇಶಿಸಿದೆ.

ನಿಯಮ ಉಲ್ಲಂಘಿಸಿದರೆ ಕಾರಣವಾದ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಶಿಸ್ತು ಕ್ರಮಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಬೇಗೂರು ಪೊಲೀಸ್ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ ಘಟನೆಯ ನಂತರ ಈ ಸುತ್ತೋಲೆ ಹೊರಡಿಸಲಾಗಿದೆ.

ಮಕ್ಕಳ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಸಾಮಾಜಿಕ ಕಾರ್ಯಕರ್ತ ನಾಗೇಶ್ ದೂರು ದಾಖಲಿಸಿದ ನಂತರ ಮಾರ್ಚ್ 29 ರಂದು ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.

2023 ರಲ್ಲಿ ಶಾಲೆಗಳಿಗೆ ಮಕ್ಕಳನ್ನು ಶೌಚಾಲಯ ಸ್ವಚ್ಛಗೊಳಿಸಲು ಬಳಕೆ ಮಾಡಿಕೊಳ್ಳದಂತೆ ಸೂಚಿಸಿ ಸುತ್ತೋಲೆ ಹೊರಡಿಸಿದ್ದರೂ, ಕೆಲವು ಶಾಲೆಗಳು ಆದೇಶವನ್ನು ಉಲ್ಲಂಘಿಸುತ್ತಲೇ ಇವೆ ಎಂದು ಇಲಾಖೆ ಗಮನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT