ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಟೆಕ್ಕಿ ಶವ ಪತ್ತೆ

ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಂತ್ರಸ್ತ ಪ್ರಶಾಂತ್ ನಾಯರ್ ಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಶಾಂತ್ ನಾಯರ್
Ramyashree GN
Updated On : 7 Apr 2025, 4:18 pm

ಬೆಂಗಳೂರು: ಸೋಮವಾರ ನಗರದ ಚಿಕ್ಕಬಾಣಾವರದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಂತ್ರಸ್ತ ಪ್ರಶಾಂತ್ ನಾಯರ್ ಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ಪತ್ನಿ ಪೂಜಾ ನಾಯರ್ ಕೂಡ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದಾರೆ. ಅವರು 12 ವರ್ಷಗಳ ಹಿಂದೆ ವಿವಾಹವಾಗಿದ್ದರು ಮತ್ತು ಅವರಿಗೆ ಎಂಟು ವರ್ಷದ ಮಗಳಿದ್ದಾಳೆ.

Advertisement

Advertisement

ಬೆಂಗಳೂರು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸೈದುಲು ಅದಾವತ್ ಮಾತನಾಡಿ, ತಮ್ಮ ಪತ್ನಿಯಿಂದ ಯಾವುದೇ ಚಿತ್ರಹಿಂಸೆ ಅನುಭವಿಸಿದ ಯಾವುದೇ ದೂರುಗಳಿಲ್ಲ ಮತ್ತು ಒಂದು ವರ್ಷದ ಹಿಂದೆಯೇ ಅವರು ಬೇರ್ಪಟ್ಟಿದ್ದರು ಎಂದು ಹೇಳಿದ್ದಾರೆ.

Also Read

ಪತ್ನಿ ಅಕ್ರಮ ಸಂಬಂಧ ಶಂಕೆ; 3 ವರ್ಷದ ಮಗನ ಕತ್ತು ಸೀಳಿದ ಟೆಕ್ಕಿ!

ಪ್ರಶಾಂತ್ ನಾಯರ್ ಅವರ ತಂದೆ ಎಂಎನ್ ಕುಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ತಮ್ಮ ಮಗ ಮತ್ತು ಪೂಜಾ ನಡುವೆ ಭಿನ್ನಾಭಿಪ್ರಾಯವಿತ್ತು. ಅವರಿಬ್ಬರು ಸ್ವಲ್ಪ ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಶುಕ್ರವಾರ ಆತ ತನ್ನ ಪತ್ನಿಯೊಂದಿಗೆ ಜಗಳವಾಡಿದ್ದನು. ನಂತರ ತಾನು ಫೋನ್ ಮೂಲಕ ಆತನನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ನನ್ನ ಕರೆಗಳಿಗೆ ಉತ್ತರಿಸದ ಕಾರಣ, ಮನೆಗೆ ತೆರಳಿ ನೋಡಿದಾಗ ಆತ ಸೀಲಿಂಗ್ ಫ್ಯಾನ್‌‌ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments