ಸಚಿವ ದಿನೇಶ್ ಗುಂಡೂರಾವ್ 
ರಾಜ್ಯ

ಡೆಂಗ್ಯೂ-ಚಿಕನ್ ಗುನ್ಯಾ ನಿಯಂತ್ರಣಕ್ಕೆ ಈಗಿನಿಂದಲೇ ಕ್ರಮವಹಿಸಿ: ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಂಗಳವಾರ ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ಬೆಂಗಳೂರು: ಮಳೆಗಾಲದಲ್ಲಿ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಈಗಿನಿಂದಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, ಡೆಂಗ್ಯೂ, ಚಿಕನ್ ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳನ್ನ ತಡೆಯಲು ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಪ್ರತಿ 16 ವರ್ಷಗಳಿಗೊಮ್ಮೆ ಚಿಕೂನ್ ಗುನ್ಯಾ ಹಾವಳಿ ಹೆಚ್ಚಾಗಿರುತ್ತದೆ. ಈ ಬಾರಿ ಚಿಕೂನ್ ಗುನ್ಯಾ 16ನೇ ವರ್ಷದ ಆವರ್ತನವಾಗಿದೆ. ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಸಜ್ಜಾಗಬೇಕು. ಚಿಕೂನ್ ಗುನ್ಯಾ ತಡೆಗಟ್ಟಲು ಆಂದೋಲನದ ರೀತಿಯಲ್ಲಿ ಕೆಲಸ ಮಾಡಬೇಕು. ಯಾವುದೇ ರೀತಿಯ ರೋಗಗಳು ಜನರಿಗೆ ಹರಡದಂತೆ ಸೂಕ್ತ ಮುನ್ನಚ್ಚರಿಕೆ ಹಾಗೂ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಇಲಾಖೆ ಆಯುಕ್ತ ಶಿವಕುಮಾರ್, ಎನ್.ಎಚ್.ಎಮ್ ವ್ಯವಸ್ಥಾಪಕ ನಿರ್ದೇಶಕ ನವೀನ್ ಭಟ್ ಸೇರಿದಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓಗಳು, ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಬಿಜೆಪಿ, ಜೆಡಿಎಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ

2026ರ ಐಪಿಎಲ್ ಗಾಗಿ RCB ಜೆರ್ಸಿ ಅನಾವರಣ; ಹೊಸ ಋತುವಿಗೆ ವಿಶಿಷ್ಟ ಲೋಗೋ, ಸ್ಟಾರ್ ಪ್ರತ್ಯಕ್ಷ!

Rottweiler ನಾಯಿ ದಾಳಿ: ಬರೊಬ್ಬರಿ 8 ಗಂಟೆ ಶಸ್ತ್ರಚಿಕಿತ್ಸೆ, 80 ಹೊಲಿಗೆ... ಕೊನೆಗೂ ಮಾಲೀಕ ಅರೆಸ್ಟ್! Video

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ

Indian Stock Market: 2ನೇ ದಿನವೂ ಮಹಾ ಏರಿಕೆ; ಕೇವಲ 15 ನಿಮಿಷದಲ್ಲಿ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ರೂ ವೃದ್ಧಿ!

SCROLL FOR NEXT