ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅನುತ್ತೀರ್ಣವಾಗುವ ಭಯ- PUC ಫಲಿತಾಂಶಕ್ಕೆ ಕೆಲವೇ ಗಂಟೆಗಳ ಮೊದಲು ವಿದ್ಯಾರ್ಥಿನಿ ಆತ್ಮಹತ್ಯೆ

ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಿಂಡ್ಲು ಎಂಬಲ್ಲಿ ನಡೆದಿದೆ.

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ಫಲಿತಾಂಶ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು 17 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಿಂಡ್ಲು ಎಂಬಲ್ಲಿ ನಡೆದಿದೆ. ಸಪ್ತಗಿರಿ ಲೇಔಟ್ ನಿವಾಸಿಯಾಗಿರುವ ವಿದ್ಯಾರ್ಥಿನಿ ತನ್ನ ಅಪಾರ್ಟ್ ಮೆಂಟ್ ನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಆಕೆ ಸಾವನ್ನಪ್ಪಿದ್ದಾಳೆ.

ಮೃತ ವಿದ್ಯಾರ್ಥಿನಿ ತಂದೆ ಉದ್ಯಮಿಯಾಗಿದ್ದು ಆಂಧ್ರಪ್ರದೇಶ ಮೂಲದರು. ಅವಳು ಸಿಇಟಿ ಮತ್ತು ಇತರ ಪರೀಕ್ಷೆಗಳಿಗೆ ಅಧ್ಯಯನ ಮಾಡಲು ಟೆರೇಸ್‌ಗೆ ಹೋಗಿದ್ದಳು ಎಂದು ಪೋಷಕರು ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಪೊಲೀಸರ ಪ್ರಕಾರ, ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಬಹುದೆಂದು ತನ್ನ ಪೋಷಕರ ಬಳಿ ಆತಂಕ ವ್ಯಕ್ತ ಪಡಿಸಿದ್ದಳು, ಆದರೂ ಯಾವುದೇ ಡೆತ್ ನೋಟ್ ಕಂಡುಬಂದಿಲ್ಲ. ವಿದ್ಯಾರಣ್ಯಪುರ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!