ವಿ.ಸೋಮಣ್ಣ 
ರಾಜ್ಯ

ಬೆಂಗಳೂರು-ಕುಕ್ಕೆ ಸುಬ್ರಹ್ಮಣ್ಯ ನಡುವೆ ಏಪ್ರಿಲ್ 12ರಿಂದ ರೈಲು ಸಂಚಾರ ಆರಂಭ: ಕೇಂದ್ರ ಸಚಿವ ವಿ.ಸೋಮಣ್ಣ

23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ.

ತುಮಕೂರು: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು.

ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಇದೆ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು.

23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಇದ್ದತಂಹ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನ ನಾವು (ಕೇಂದ್ರ ಸರ್ಕಾರ) ಕೈಗೆತ್ತಿಕೊಂಡಿದ್ದೇವೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.

ಬಟವಾಡಿ ಗೇಟ್​ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭ ಮಾಡಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ, ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಸತುವೆ ಮಾಡಲಾಗುತ್ತಿದೆ. 650 ಕೋಟಿ ರೂ. ವೆಚ್ಚದ 22 ಮೇಲ್ಸತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.

ಇನ್ನೂ ತುಮಕೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಡಿಕೆ ಹೆಚ್ಚಿದ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು 34 ಜನ ಶಾಸಕರು ಜಯಚಂದ್ರ ನೇತೃತ್ವದಲ್ಲಿ ದೆಹಲಿಗೆ ಬಂದು ನನಗೆ ಮನವಿ ಕೊಟ್ಟಿದ್ದಾರೆ. ಅದನ್ನು ನಮ್ಮ ನಾಗರಿಕ ವಿಮಾನಯಾನ ಇಲಾಖೆ ಸಚಿವ ನಾಯ್ಡು ಅವರಿಗೆ ಸಲ್ಲಿಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸುವುದಕ್ಕೂ ಮೊದಲೇ ಈ ಪ್ರಕ್ರಿಯೆ ಆಗಿತ್ತು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT