ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19 ಹಗರಣ: ನ್ಯಾ. ಡಿ. ಕುನ್ಹಾ ತನಿಖಾ ಆಯೋಗದ ಅವಧಿ ಮತ್ತೆ ವಿಸ್ತರಣೆ

ಕೋವಿಡ್ ಹಗರಣ ಪ್ರಕರಣದ ತನಿಖೆಗಾಗಿ ಈ ಹಿಂದೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿತ್ತು. ಆಯೋಗ ಅವಧಿಯು ಮಾರ್ಚ್ 31, 2025 ರಂದು ಕೊನೆಗೊಂಡಿತ್ತು. ಇದೀಗ ಈ ವಿಚಾರಣಾ ಆಯೋಗದ ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡಿದೆ.

ಬೆಂಗಳೂರು: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಕೋವಿಡ್ -19 ರೋಗಿಗಳ ಸಾವಿನ ಬಗ್ಗೆ ತನಿಖೆ ನಡೆಸಿದ ನ್ಯಾಯಮೂರ್ತಿ ಮೈಕೆಲ್ ಡಿ'ಕುನ್ಹಾ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ಜೂನ್ 30, 2025 ರವರೆಗೆ ವಿಸ್ತರಿಸಿದೆ.

ಕೋವಿಡ್ ಹಗರಣ ಪ್ರಕರಣದ ತನಿಖೆಗಾಗಿ ಈ ಹಿಂದೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿತ್ತು. ಆಯೋಗ ಅವಧಿಯು ಮಾರ್ಚ್ 31, 2025 ರಂದು ಕೊನೆಗೊಂಡಿತ್ತು. ಇದೀಗ ಈ ವಿಚಾರಣಾ ಆಯೋಗದ ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದವರ ಪ್ರಕರಣ ಸಂಬಂಧ ಪರಿಶೀಲನೆ ನಡೆಯಲಿದ್ದು, ಈ ನಿಟ್ಟಿನಲ್ಲಿ ತನಿಖಾ ಆಯೋಗದ ಅವಧಿಯನ್ನು ಏಪ್ರಿಲ್ 1 ರಿಂದ ಜೂನ್ 30 ರವರೆಗೆ ವಿಸ್ತರಿಸಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೈದ್ಯಕೀಯ ಖರೀದಿಯಲ್ಲಿನ ಅಕ್ರಮಗಳು ಮತ್ತು ದುರುಪಯೋಗದಿಂದಾಗಿ ಸಂಭವಿಸಿದ ಸರಣಿ ಸಾವುಗಳ ತನಿಖೆಗಾಗಿ ರಚಿಸಲಾಗಿದ್ದ ಈ ಆಯೋಗವು ಏಪ್ರಿಲ್ 5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ಎರಡನೇ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು.

ಆಯೋಗವನ್ನು ಆಗಸ್ಟ್ 25, 2023 ರಂದು ರಚಿಸಲಾಗಿತ್ತು. ಪ್ರಕರಣ ಸಂಬಂಧ 3 ತಿಂಗಳಲ್ಲಿ ವರದಿ ಸಲ್ಲಿಸಬೇಕಿತ್ತು. ಆದರೆ, ಮೊದಲ ಮಧ್ಯಂತರ ವರದಿಯನ್ನು ಆಗಸ್ಟ್ 31, 2024 ರಂದು ಸಲ್ಲಿಸಿತು. ಬಳಿಕ ಆಯೋಗದ ಅವಧಿಯನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಯಿತು. ಈಗ ಮತ್ತೆ ಮೂರು ತಿಂಗಳಿಗೆ ಅವಧಿಯನ್ನು ವಿಸ್ತರಣೆ ಮಾಡಿದೆ.

ಅಧಿಕಾರಿಗಳ ಸಹಕಾರದ ಕೊರತೆ ಹಾಗೂ ಸಿಬ್ಬಂದಿ ಕೊರತೆಯನ್ನು ಆಯೋಗ ಎದುರಿಸುತ್ತಿದ್ದು, ಇದೇ ಆಯೋಗದ ಅವಧಿ ವಿಸ್ತರಣೆಗೆ ಕಾರಣವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ