ಅಪಘಾತಕ್ಕೀಡಾದ ಕಾರು 
ರಾಜ್ಯ

ಬೆಂಗಳೂರು: ದಾಬಸ್ ಪೇಟೆ ಬಳಿ ಡಿವೈಡರ್​ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಬೆಂಗಳೂರು - ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಕಾರು ಚಾಲಕ ಗೋಪಾಲ್(45), ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂದು ಗುರುತಿಸಲಾಗಿದೆ.

ಬೆಂಗಳೂರು: ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಕಾರೊಂದು ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಇಂದು ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಕಾರು ಚಾಲಕ ಗೋಪಾಲ್(45), ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಮಕ್ಕಳಿಬ್ಬರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು ಎಂದು ತಿಳಿದು ಬಂದಿದೆ.

ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸಂಚಾರ ಸುಗಮಗೊಳಿಸಿದರು.

ಬೆಂಗಳೂರು ಗ್ರಾಮಾಂತರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಅಪಘಾತದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!