ಸಂಪುಟ ಸಭೆ(ಸಂಗ್ರಹ ಚಿತ್ರ) 
ರಾಜ್ಯ

ಸಚಿವ ಸಂಪುಟ ಸಭೆ: ವಿರೋಧದ ನಡುವೆಯೂ ಜಾತಿ ಜನಗಣತಿ ವರದಿ ಮಂಡನೆ ಸಾಧ್ಯತೆ, ಹೆಚ್ಚಿದ ಕುತೂಹಲ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬರೋಬ್ಬರಿ 169 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ ವರದಿಯನ್ನು ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ಎಚ್. ಕಾಂತರಾಜ್ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾಗ ನಡೆಸಲಾದ 2015 ರ ಸಾಮಾಜಿಕ-ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ವರದಿಯನ್ನು ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ಸಂಪುಟದ ತೀರ್ಮಾನ ಕುರಿತು ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬರೋಬ್ಬರಿ 169 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ ವರದಿಯನ್ನು ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ವರದಿ ಕುರಿತು ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದಿಂದ ವಿರೋಧ ವ್ಯಕ್ತವಾಗುತ್ತಿದ್ದು, ಸ್ವಪಕ್ಷೀಯ ನಾಯಕರಿಂದಲೂ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಯಾವ ನಡೆ ಅನುಸರಿಸಲಿದೆ ಎಂಬುದರ ಕುರಿತು ಕುತೂಹಲ ಮೂಡಿದೆ.

ದುರ್ಬಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯವನ್ನು ಖಚಿತಪಡಿಸುವುದು ಅಧ್ಯಯನದ ಉದ್ದೇಶವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಆ ನ್ಯಾಯದ ಹಾದಿಯು ಸವಾಲುಗಳಿಂದ ಕೂಡಿದೆ ಎಂದು ಇತರರು ಹೇಳುತ್ತಿದ್ದಾರೆ.

2015ರ ವರದಿ ಇದಾಗಿದ್ದು, ಬಹಳ ಹಿಂದಿನಿಂದಲೂ ಬಾಕಿ ಇದೆ. ಸರ್ಕಾರ ವಿಳಂಬ ಮಾಡುವುದನ್ನು ನಿಲ್ಲಿಸಿ ನಿರ್ಣಾಯಕವಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್ ಅವರು ಹೇಳಿದ್ದಾರೆ.

ಏತನ್ಮಧ್ಯೆ, ಸಚಿವ ಸಂಪುಟದಲ್ಲಿ ವರದಿ ಮಂಡನೆ ಮಾಡಲು ಸರ್ಕಾರದ ಮುಂದಾಗಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕಾಂತರಾಜ್ ಅವರು ಹೇಳಿದ್ದಾರೆ.

2015 ರ ಸಮೀಕ್ಷೆಯನ್ನು ಆಧರಿಸಿ 2024ರಲ್ಲಿ ಅಂತಿಮ ವರದಿಯನ್ನು ಸಲ್ಲಿಸಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡನೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದೀಗ ನಿರ್ಣಯ ಕುರಿತು ಕಾಯುತ್ತಿದ್ದೇನೆ. ವರದಿಯನ್ನು ಮಂಡಿಸಿದ್ದೇ ಆದರೆ, ಸಂತೋಷವಾಗುತ್ತದೆ. ಚೆಂಡು ಸರ್ಕಾರದ ಅಂಗಳದಲ್ಲಿದೆ ಎಂದು ಹೇಳಿದ್ದಾರೆ.

ವೀರಶೈವ ಮಹಾಸಭಾದ ಕಾರ್ಯದರ್ಶಿ ರೇಣುಕಾ ಪ್ರಸನ್ನ ಅವರು ಮಾತನಾಡಿ, ನಾವು ಕಾಂತರಾಜ್ ವರದಿಯನ್ನು ವಿರೋಧಿಸುತ್ತೇವೆ. ಇದು ಅವೈಜ್ಞಾನಿಕ. ಸರ್ಕಾದ ವೀರಶೈವ-ಲಿಂಗಾಯತ ಸಚಿವರನ್ನು ಭೇಟಿ ಮಾಡಿ, ವರದಿಯಿಂದ ಎದುರಾಗುವ ಅಪಾಯಗಳ ಕುರಿತು ವಿವರಿಸಿದ್ದೇವೆ. ನಮ್ಮ ಸಮುದಾಯದ ಹಿತಾಸಕ್ತಿಗಳಿಗೆ ಹಾನಿಯಾದರೆ, ನಮ್ಮ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

2016 ರಲ್ಲಿ ವರದಿಯ ವಿರುದ್ಧ ಪ್ರತಿಭಟನೆಗಳನ್ನು ಮುನ್ನಡೆಸಿದ್ದ ಒಕ್ಕಲಿಗ ಕ್ರಿಯಾ ಸಮಿತಿ ನಾಯಕ ಕೆ.ಜಿ. ಕುಮಾರ್ ಅವರು ಮಾತನಾಡಿ, ಈ ವರದಿಯು ಅವೈಜ್ಞಾನಿಕವಾಗಿದೆ. ಇದನ್ನು ಅಂಗೀಕರಿಸಿದರೆ, ನಾವು ಪ್ರತಿಭಟನೆಗಿಳಿಯಬೇಕಾಗುತ್ತದೆ ಎಂದು ಹೇಳಿದ್ದಾರೆ

ಜಾತಿಗಣತಿ ನಡೆಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನ ಅವಧಿಯಲ್ಲಿ (2014) ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಎಚ್.ಕಾಂತರಾಜು ಅವರನ್ನು ನೇಮಿಸಿದ್ದರು. 10 ವರ್ಷಗಳ ಬಳಿಕ ಕಳೆದ ವರ್ಷ ಪೂರ್ಣ ಪ್ರಮಾಣದ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್‌ ಹೆಗ್ಡೆ ಮೂಲಕ ಮುಖ್ಯ ಮಂತ್ರಿಗಳಿಗೆ ವರದಿ ಸಲ್ಲಿಕೆ ಮಾಡಲಾಗಿದೆ.

ಇದರ ಬೆನ್ನಲ್ಲೇ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗಸಮುದಾಯಗಳು ವರದಿ ವೈಜ್ಞಾನಿಕವಾಗಿಲ್ಲ. ಮನೆ-ಮನೆಗೂ ಹೋಗಿ ಸಮೀಕ್ಷೆ ನಡೆಸಿಲ್ಲ. ಜೊತೆಗೆ ಮೂಲ ವರದಿ ನಾಪತ್ತೆಯಾಗಿದ್ದು, ವರದಿಯಲ್ಲಿ ಆಯೋಗದ ಅಧ್ಯಕ್ಷರು, ಸದಸ್ಯರ ಸಹಿ ಇಲ್ಲ ಎಂಬೆಲ್ಲ ಆರೋಪಗಳು ಕೇಳಿ ಬಂದಿದ್ದವು. ಸಿದ್ದರಾಮಯ್ಯ ಅವರುವರದಿ ಜಾರಿಗೆ ಮುಂದಾಗ ಕ್ಷೀಯ ಶಾಸಕರೇ ಆಕ್ಷೇಪ ವ್ಯಕ್ತಪಡಿಸಿದ್ದರು.

2024 ಅಕ್ಟೋಬರ್‌ನಲ್ಲಿ ಬಿಜೆಪಿ ಪರಿಷತ್‌ ಸದಸ್ಯ ಎನ್.ರವಿಕುಮಾರ್, ಕಾಂಗ್ರೆಸ್ ನ ಬಿ.ಕೆ.ಹರಿಪ್ರಸಾದ್ ಸೇರಿ ಹಿಂದುಳಿದ ವರ್ಗಗಳ 30 ಸಚಿವರು, ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವರದಿ ಅನುಷ್ಠಾನಕ್ಕೆ ಮನವಿ ಮಾಡಿದ್ದರು. ಈ ವೇಳೆ ಅ.18 ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಬಳಿಕ 9.25 ರ ಸಂಪುಟದಲ್ಲಿ ಮಂಡಿಸುವುದಾಗಿ ಹೇಳಿ ಮುಂದೂಡಿದರು. ಇದರ ಬೆನ್ನಲ್ಲೇ ಉಪಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿದ್ದರಿಂದ ಸಿದ್ದರಾಮಯ್ಯ ತಟಸ್ಥರಾದರು.

ಬಳಿಕ 2025ರ ಜನವರಿ ತಿಂಗಳಲ್ಲಿ ಮತ್ತೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿ ಹೇಳಿ ಸಿದ್ದರಾಮಯ್ಯ ಅವರು ತಾತ್ಕಾಲಿಕವಾಗಿ ಹಿಂದೆ ಸರಿದಿದ್ದರು. ಇದೀಗ ಶುಕ್ರವಾರ ಸಚಿವ ಸಂಪುಟ ಸಭೆ ಅಜೆಂಡಾ ಪ್ರಕಾರವೇ ನಡೆದರೆ ಮೊದಲಬಾರಿಗೆ ವರದಿ ಮಂಡನೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ, ಮನೆ ಖಾಲಿ ಮಾಡಲು ಬಿಗ್‌ಬಾಸ್‌ ಸ್ಪರ್ಧಿಗಳಿಗೆ 1 ಗಂಟೆ ಗಡುವು!

ತಮ್ಮದೇ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಹರಿಯಾಣ ಎಡಿಜಿಪಿ ಆತ್ಮಹತ್ಯೆ!

CM ಬದಲಾವಣೆ ಹೇಳಿಕೆಗಳಿಗೆ 'ಬ್ರೇಕ್ ಹಾಕಿ': ಕಾಂಗ್ರೆಸ್ ಹೈಕಮಾಂಡ್​​ಗೆ ಹಿರಿಯ ಸಚಿವರ ಆಗ್ರಹ

ಮಾರಣಾಂತಿಕ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ, ಬಿಜೆಪಿ ಸಂಸದನ ಆರೋಗ್ಯ ವಿಚಾರಿಸಿದ ಮಮತಾ

ಇದು 'ಮೋದಾನಿ-ನಿರ್ಭರ್ ಭಾರತ': ಸರ್ಕಾರದ ಹಳದಿ ಬಟಾಣಿ ಆಮದು ನೀತಿ ಟೀಕಿಸಿದ ಕಾಂಗ್ರೆಸ್

SCROLL FOR NEXT