ಗದಗ: ಅಪ್ರಾಪ್ತ ಪುತ್ರಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗೆ ಆಕೆಯನ್ನು ಗರ್ಭಿಣಿಯಾಗಿಸಿದ ಹೇಯಕೃತ್ಯ ಗದಗ ಜಿಲ್ಲೆಯಲ್ಲಿ ನಡೆದಿದೆ.
55 ವರ್ಷದ ವ್ಯಕ್ತಿ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ನಡೆಸಿದ್ದು, ಪರಿಣಾಮ ವರ್ಷದ ಬಾಲಕಿ ಇದೀಗ ಗರ್ಭಿಣಿಯಾಗಿದ್ದಾಳೆ. ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ಪೊಲೀಸರು, ಕಾಮುಕ ತಂದೆ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಈ ವೇಳೆ ಆಕೆಯ ತಾಯಿ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಐಎಂಎಸ್)ಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿ ಎಂಬ ವಿಚಾರ ಬೆಳಕಿಗೆ ಬಂದಿದೆ.
ಬಳಿಕ ಬಾಲಕಿಯನ್ನು ವಿಚಾರಿಸಿದಾಗ ತಂದೆ ತನ್ನ ಮೇಲೆ ನಡೆಸಿದ ಪೈಶಾಚಿಕ ಕೃತ್ಯದ ಕುರಿತು ಬಾಯ್ಬಿಟ್ಟಿದ್ದಾರೆ. ವಿಚಾರವನ್ನು ಯಾರಿಗಾದರೂ ಹೇಳಿದರೆ ಹತ್ಯೆ ಮಾಡುವುದಾಗಿ ತಂದೆ ಬೆದರಿಗೆ ಹಾಕಿದ್ದು, ಭಯದಿಂದ ಯಾರಿಗೂ ಹೇಳಿರಲಿಲ್ಲ ಎಂದು ಬಾಲಕಿ ಹೇಳಿಕೊಂಡಿದ್ದಾಳೆ.
ಇದೀಗ ಬಾಲಕಿಯ ತಾಯಿ ಮುಳಗುಂದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿ ರಮೇಶ್ ನನ್ನು ಬಂಧನಕ್ಕೊಳಪಡಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಲತಂದೆಯಿಂದ ಕಿರುಕುಳ ಪ್ರಕರಣಗಳು ಸಾಮಾನ್ಯ ಆದರೆ, ಈ ಪ್ರಕರಣದಲ್ಲಿ ಸ್ವಂತ ಮಗಳ ಮೇಲೆ ಅತ್ಯಾಚಾರ ಮಾಡಿರುವುದು ನಿಜಕ್ಕೂ ಆಘಾತ ತಂದಿದೆ ಎಂದು ವೈದ್ಯರು ಹೇಳಿದ್ದಾರೆ.