ಕಂಬಕ್ಕೆ ಕಟ್ಟಿಹಾಕಿ ಯುವಕನಿಗೆ ಥಳಿತ 
ರಾಜ್ಯ

ಮಂಡ್ಯ: ಹಣಕಾಸು ವಿಚಾರಕ್ಕೆ ಕಂಬಕ್ಕೆ ಕಟ್ಟಿಹಾಕಿ ಯುವಕನಿಗೆ ಥಳಿತ

ಹಲ್ಲೆಗೊಳಗಾದ ಯುವಕನನ್ನು ನಾಗೇಶ್ ಎಂದು ಗುರುತಿಸಲಾಗಿದೆ. ನಾಗೇಶ್ ಮತ್ತು ಅದೇ ಗ್ರಾಮದ ಚಲುವೇಶ್ ನಡುವೆ ಹಣದ ವಿಚಾರಕ್ಕೆ ಜಗಳ ನಡೆದಿದೆ ಎಂದು ವರದಿಯಾಗಿದೆ.

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಣಕಾಸಿನ ವಿಚಾರಕ್ಕೆ ಯುವಕನನ್ನು ಸಾರ್ವಜನಿಕವಾಗಿ ಧ್ವಜ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.

ಹಲ್ಲೆಗೊಳಗಾದ ಯುವಕನನ್ನು ನಾಗೇಶ್ ಎಂದು ಗುರುತಿಸಲಾಗಿದೆ. ನಾಗೇಶ್ ಮತ್ತು ಅದೇ ಗ್ರಾಮದ ಚಲುವೇಶ್ ನಡುವೆ ಹಣದ ವಿಚಾರಕ್ಕೆ ಜಗಳ ನಡೆದಿದೆ ಎಂದು ವರದಿಯಾಗಿದೆ.

ಗ್ರಾಮಸ್ಥರ ಪ್ರಕಾರ, ನಾಗೇಶ್, ಚಲುವೇಶ್‌ಗೆ ಚಾಕುವಿನಿಂದ ಬೆದರಿಕೆ ಹಾಕಿದ್ದಾರೆ. ಇದರಿಂದ ಆಕ್ರೋಶಗೊಂಡ ಚಲುವೇಶ್ ಮತ್ತು ಅವರ ಸ್ನೇಹಿತರ ಗುಂಪು ನಾಗೇಶ್ ಅವರನ್ನು ಧ್ವಜ ಕಂಬಕ್ಕೆ ಕಟ್ಟಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನಾಗೇಶ್ ಕೈ ಮತ್ತು ಕಾಲುಗಳನ್ನು ಕಂಬಕ್ಕೆ ಕಟ್ಟಿ ಹಾಕಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಹಲವು ವ್ಯಕ್ತಿಗಳು ಸರದಿಯಂತೆ ನಾಗೇಶ್ ಗೆ ಕಪಾಳಮೋಕ್ಷ ಮಾಡಿದ್ದಾರೆ.

ಈ ವೇಳೆ ಕೆಲವು ವ್ಯಕ್ತಿಗಳು ನಾಗೇಶ್ ನನ್ನು ರಕ್ಷಿಸಲು ಪ್ರಯತ್ನಿಸುತ್ತಿರುವುದು ಸಹ ಕಂಡುಬರುತ್ತದೆ. ಒಬ್ಬ ವ್ಯಕ್ತಿ ಆತನಿಗೆ ನೀರು ನೀಡುವುದನ್ನು ಕಾಣಬಹುದು.

ಈ ಸಂಬಂಧ ನಾಗೇಶ್ ಅವರ ಪತ್ನಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್