ಸಿಎಂ ಸಿದ್ದರಾಮಯ್ಯ 
ರಾಜ್ಯ

ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ

ವಿಧಾನಸೌಧದ ಮುಂಭಾಗ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಬೆಂಗಳೂರು: ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಮುಂಭಾಗ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ಇದ್ದಂತೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡಿದರೆ, ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ.

ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತಷ್ಟು ಕೊಡಲಾಗುವುದು. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ.

ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣ ಬೈರೇಗೌಡರು ಸರ್ವೇಯರ್‌ಗಳ ನೇಮಕಾತಿ ಮಾಡಿದ್ದಾರೆ. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ಆರ್‌ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಘೋಷಿಸಿದರು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ರಿಜ್ವಾನ್ ಅರ್ಹದ್, ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT