ಡಿ.ಕೆ ಶಿವಕುಮಾರ್ 
ರಾಜ್ಯ

ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿ ದ್ವಂದ್ವ ನಿಲುವಿನ ವಿರುದ್ಧ ಏಪ್ರಿಲ್ 17 ರಂದು ಪ್ರತಿಭಟನೆ: ಡಿ.ಕೆ ಶಿವಕುಮಾರ್

ಬಿಜೆಪಿಯವರು ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಗೆ ತಲಾ 2 ರೂಪಾಯಿ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಜಾಸ್ತಿ ಮಾಡಿ ಉದ್ಘಾಟನೆ ಮಾಡಿ‌, ಇವರ ಯಾತ್ರೆಗೆ 'ಗಿಫ್ಟ್' ಕಳಿಸಿದ್ದಾರೆ.

ಬೆಂಗಳೂರು: ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ಇಬ್ಬಗೆ ನೀತಿಯ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹೋರಾಟದ ಸ್ವರೂಪವನ್ನು ಶೀಘ್ರ ತಿಳಿಸಲಾಗುತ್ತದೆ. ಅವರ ಜನಾಕ್ರೋಶ ಯಾತ್ರೆಯ ವಿರುದ್ಧ ನಾವು ಏನಾದರೂ ಮಾಡಬೇಕಲ್ಲವೇ?" ಎಂದು ಹೇಳಿದರು.

ಆರ್.ಅಶೋಕ್ ಹಾಗೂ ವಿಜಯೇಂದ್ರ ಅವರಿಗೆ ಕೇವಲ ರಾಜ್ಯ ಸರ್ಕಾರ ಏರಿಸಿದ ಹಾಲಿನ ದರ ಮಾತ್ರ ಕಣ್ಣಿಗೆ ಕಾಣುತ್ತಿದೆಯೇ? ಬಿಜೆಪಿ ರಾಜ್ಯದಲ್ಲಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಾಡುತ್ತಿರುವ ಯಾತ್ರೆ" ಕುಹಕವಾಡಿದರು.

"ಬಿಜೆಪಿಯವರು ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಗೆ ತಲಾ 2 ರೂಪಾಯಿ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಜಾಸ್ತಿ ಮಾಡಿ ಉದ್ಘಾಟನೆ ಮಾಡಿ‌, ಇವರ ಯಾತ್ರೆಗೆ 'ಗಿಫ್ಟ್' ಕಳಿಸಿದ್ದಾರೆ. ಇದರ ಬಗ್ಗೆ ಜನಸಾಮಾನ್ಯರು ಮಾಡುತ್ತಿರುವ ಗುಣಗಾನವನ್ನು ಎಲ್ಲರು ಕೇಳಬೇಕು. ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಜನಾಕ್ರೋಶ ಯಾತ್ರೆ ಎಂದು ಬಿಜೆಪಿಯವರು ಬೋರ್ಡ್ ಹಾಕಿಕೊಳ್ಳಬೇಕು" ಎಂದರು.

"ಬುಧವಾರದಂದು ಕಚ್ಚಾ ತೈಲದ ಬೆಲೆ ಶೇ. 4.23 ರಷ್ಟು ಇಳಿಕೆಯಾಗಿದೆ. ಆದರೂ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ನ ಮೂಲ ದರ ಪ್ರತಿ ಲೀಟರ್ ಗೆ 42.60 ಪೈಸೆ ಇದೆ. ದೇಶದಾದ್ಯಂತ ಪ್ರತಿ ಲೀಟರ್ ಪೆಟ್ರೋಲ್ ‌103 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಒಂದು ಲೀಟರ್ ಗೆ ರೂ.60 ರೂಪಾಯಿ ಲಾಭ ಸರ್ಕಾರಕ್ಕೆ ಸಿಗುತ್ತಿದೆ. ಡೀಸಲ್ ಬೆಲೆ ರೂ.91 ರೂಪಾಯಿ ಇದೆ. ರೂ. 43 ಲಾಭ ಮಾಡುತ್ತಿದ್ದಾರೆ. ಶೇಕಡ 60 ರಷ್ಟು ತೆರಿಗೆ ಪೆಟ್ರೋಲ್, ಡೀಸೆಲ್ ಮೇಲೆ ಹಾಕಿದ್ದಾರೆ" ಎಂದರು.

ನಮ್ಮ ಸರ್ಕಾರ ರೈತರ ಬದುಕನ್ನು ಉಳಿಸಲು ಹಾಲಿನ ದರ ಏರಿಕೆ ಮಾಡಿದ್ದೇವೆ. ಶಾಸಕರಾದ ವಿನಯ್ ಕುಲಕರ್ಣಿ ಅವರು ಪಶುಸಂಗೋಪನೆ ಮಾಡುತ್ತಿದ್ದಾರೆ. ಎಷ್ಟು ಖರ್ಚು ವೆಚ್ಚಗಳು ಹೆಚ್ಚಾಗಿವೆ ಎಂದು ಅವರನ್ನೇ ಕೇಳಬೇಕು. ಬಿಜೆಪಿಯವರು ಜಾನುವಾರುಗಳ ಬೂಸಾ, ಹಿಂಡಿ ಬೆಲೆಯನ್ನು ಏಕೆ ಕಡಿಮೆ ಮಾಡಿಸಲಿಲ್ಲ" ಎಂದರು‌.

"ಹಾಲಿನ ದರ ನಮ್ಮ ರಾಜ್ಯದಲ್ಲಿ ಅತ್ಯಂತ ಕಡಿಮೆಯಿದೆ. ಕರ್ನಾಟಕದಲ್ಲಿ 42 ರೂಪಾಯಿ ಇದ್ದರೆ. ಕೇರಳ 52 ರೂ, ಗುಜರಾತ್ 53 ರೂ, ದೆಹಲಿ 55 ರೂ, ಮಹಾರಾಷ್ಟ್ರ 52 ರೂ, ತೆಲಂಗಾಣ 58 ರೂ, ಅಸ್ಸಾಂ 60 ರೂ, ಹರಿಯಾಣ 56 ರೂ, ರಾಜಸ್ಥಾನ 50 ರೂ, ಮಧ್ಯಪ್ರದೇಶ 52 ರೂ, ಪಂಜಾಬ್ 56 ರೂ, ಉತ್ತರ ಪ್ರದೇಶ 56 ರೂಪಾಯಿ ಬೆಲೆಯಿದೆ" ಎಂದು ವಿವರಿಸಿದರು‌.

"ನೀರಿನ ಬೆಲೆ ಏರಿಕೆಯನ್ನು ಅತ್ಯಂತ ಕಡಿಮೆ ಮಾಡಿದ್ದೇವೆ. ಕಸ ಸಂಗ್ರಹಣೆ ಶುಲ್ಕವನ್ನು ಈ ಹಿಂದಿನ ಬಿಜೆಪಿ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಕಡಿಮೆ ನಿಗದಿ ಮಾಡಿ ಬಡವರ ಪರವಾಗಿ ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಜನರ ಬದುಕು ಹಸನಾಗಲಿ ಎಂದು ಗ್ಯಾರಂಟಿ ಯೋಜನೆ ಮೂಲಕ ರೂ.52 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ" ಎಂದರು.

"ಯುಪಿಎ ಸರ್ಕಾರದ ಅವಧಿಯಲ್ಲಿ ಚಿನ್ನದ ಬೆಲೆ ರೂ. 28 ಸಾವಿರವಿತ್ತು ಈಗ ರೂ.92 ಸಾವಿರವಿದೆ. 10 ಸಾವಿರವಿದ್ದ ಮೊಬೈಲ್ ದರ 30 ಸಾವಿರಕ್ಕೆ ಏರಿಕೆಯಾಗಿದೆ. ರೂ.13 ಸಾವಿರವಿದ್ದ 32 ಇಂಚಿನ ಟಿವಿ ರೂ.36 ಸಾವಿರವಾಗಿದೆ. 1.5 ಟನ್ ಸಾಮರ್ಥ್ಯದ ಎಸಿ ಬೆಲೆ ರೂ.25 ಸಾವಿರದಿಂದ ರೂ.44 ಸಾವಿರಕ್ಕೆ ಏರಿಕೆಯಾಗಿದೆ. ಫ್ರಿಡ್ಜ್ ಬೆಲೆ ರೂ. 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಾಗಿದೆ. ರೂ.59 ಇದ್ದ ಡಾಲರ್ ಬೆಲೆ ಈಗ ರೂ. 89 ಆಗಿದೆ. ಸಿಮೆಂಟ್ ಬೆಲೆ 268 ಇದ್ದಿದ್ದು ಈಗ ರೂ.410 ಕ್ಕೆ ಹೆಚ್ಚಳಗಿದೆ. ಈ ಬೆಲೆಯನ್ನೆಲ್ಲಾ ಯಾರೂ ನಿಯಂತ್ರಣ ಮಾಡುವವರು" ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT