ರಾಜ್ಯ

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ! Video

ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಇನ್ನು ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿತ್ತು. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದರು. ಆದರೆ ಪೊಲೀಸರ ಮೇಲೆ ರಿತೇಶ್ ಕುಮಾರ್ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ನುಗ್ಗಿದ್ದರಿಂದ ಅಲ್ಲೆ ಕುಸಿದುಬಿದ್ದನು. ಆರೋಪಿಯನ್ನು ರಕ್ಷಿಸುವ ಸಲುವಾಗಿ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿತ್ತು. ಬಾಲಕಿ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದು ಹೊರೆಗೆ ಮಗು ಆಟವಾಡುತ್ತಿತ್ತು. ಇದನ್ನು ಗಮನಿಸಿದ ರಿತೇಶ್ ಕುಮಾರ್ ಚಾಕಲೇಟ್ ಕೊಡುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ. ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮಗಳು ಕಾಣೆಯಾಗಿದ್ದಾಳೆಂದು ತಾಯಿಗೆ ತಿಳಿದಾಗ, ಆಕೆ ಸ್ಥಳೀಯರೊಂದಿಗೆ ಸೇರಿ ಆಕೆಗಾಗಿ ಹುಡುಕಾಟ ಆರಂಭಿಸಿದರು. ಬಾಲಕಿಯ ಪೋಷಕರು ಕೊಪ್ಪಳದವರಾಗಿದ್ದು, ಪೇಂಟಿಂಗ್ ಕೆಲಸಕ್ಕಾಗಿ ಹುಬ್ಬಳ್ಳಿಗೆ ಬಂದಿದ್ದರು ಸ್ಥಳೀಯರ ಪ್ರಕಾರ, ನಿರ್ಮಾಣ ಹಂತದ ಕಟ್ಟಡದ ಬಳಕೆಯಾಗದ ಶೌಚಾಲಯದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.

ಶವ ಪತ್ತೆಯಾದ ಕೂಡಲೇ ಸ್ಥಳೀಯರು, ವಿಶೇಷವಾಗಿ ಮಹಿಳೆಯರು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗೆ ಭೇಟಿ ನೀಡಿ ಪ್ರತಿಭಟನಾ ನಿರತ ಜನರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಇನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಸ್ಥಳೀಯರು ಆರೋಪಿಯನ್ನು ಗುರುತಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆಗೆ ಇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್