ಶೆಡ್ ಗಳಿಗೆ ಬೆಂಕಿ  
ರಾಜ್ಯ

ಬೆಂಗಳೂರು: ಆಕಸ್ಮಿಕ ಅಗ್ನಿ ಅವಘಡಕ್ಕೆ 20ಕ್ಕೂ ಹೆಚ್ಚು ಶೆಡ್ ಗಳು ಬೆಂಕಿಗಾಹುತಿ

ಶೆಡ್​​ನಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಬೆಂಗಳೂರು: ಆಕಸ್ಮಿಕವಾಗಿ ಉಂಟಾದ ಅಗ್ನಿ ಅವಘಡದಲ್ಲಿ ಕೂಲಿ ಕಾರ್ಮಿಕರು ವಾಸವಿದ್ದ 20ಕ್ಕೂ ಹೆಚ್ಚು ಶೆಡ್​ಗಳು ಬೆಂಕಿಗಾಹುತಿ ಆಗಿರುವ ಘಟನೆ ಬೆಂಗಳೂರಿನ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ನಡೆದಿದೆ. ಬೆಂಕಿ ಅವಘಡದಿಂದ ಆಟಿಕೆ ಫ್ಯಾಕ್ಟರಿಯ ಕಾರ್ಮಿಕರಿಗೆ ನಿರ್ಮಿಸಲಾಗಿದ್ದ 50 ಶೆಡ್ ಗಳ ಪೈಕಿ 20 ಶೆಡ್​ಗಳು ಬೆಂಕಿಗಾಹುತಿ ಆಗಿವೆ.

ಶೆಡ್​​ನಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜನರಿಗೆ ವೀರನಪಾಳ್ಯ ಮುಖ್ಯ ರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿದ್ದ ಶೆಡ್​ಗಳನ್ನು ನಿರ್ಮಿಸಲಾಗಿದೆ. ಮೊದಲಿಗೆ ಒಂದು ಶೆಡ್​ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಇತರೆ ಶೆಡ್​ಗಳಿಗೂ ಹಬ್ಬಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಜನರು ಹೊರಗೆ ಓಡಿ ಬಂದಿದ್ದಾರೆ.

ಅನೇಕ ವರ್ಷಗಳಿಂದ ಮಕ್ಕಳು, ಮಹಿಳೆಯರು ಚಿಕ್ಕ ಚಿಕ್ಕ ಶೆಡ್​ಗಳಲ್ಲಿ 100ಕ್ಕೂ ಹೆಚ್ಚು ಜನರು ಇಲ್ಲೇ ವಾಸವಿದ್ದರು. ಬೆಂಕಿಯ ಜ್ವಾಲೆಗೆ ಶೆಡ್​ಗಳು ಬೆಂಕಿಗಾಹುತಿ ಹಿನ್ನಲೆ ಕೂಲಿ ಕಾರ್ಮಿಕರ ಬದುಕು ಬೀದಿಗೆ ಬಂದಿದೆ. ಇತ್ತ ಬೆಳಗ್ಗೆ ಜಾಗದ ಮಾಲೀಕ‌ ಸ್ಥಳಕ್ಕೆ ಬಂದು ಇತರೆ ಶಡ್​ಗಳಲ್ಲಿರುವ ಜನರಿಗೆ ಆದಷ್ಟು ಬೇಗ ಎಲ್ಲರೂ ಮನೆ ಖಾಲಿ ಮಾಡಲು ಸೂಚಿಸಿದ್ದು, ಮಾಲೀಕನ ಮಾತು ಕೇಳಿ ಬಡ ಜನರು ತಬ್ಬಿಬ್ಬಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?