ಡಿ.ಕೆ. ಶಿವಕುಮಾರ್  
ರಾಜ್ಯ

ಧರ್ಮದ ಹೆಸರಲ್ಲಿ ರಾಜಕಾರಣ ನೀಚತನ; ಅವರವರ ಸಮಾಜವನ್ನು ಅವರೇ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದಾರೆ, ತಪ್ಪೇನು?: ಡಿ.ಕೆ ಶಿವಕುಮಾರ್

ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದೇವೆ.

ಬೆಂಗಳೂರು: ಬೆಂಗಳೂರು ಭಾವೈಕ್ಯತೆಯ ದೊಡ್ಡ ಸಂಕೇತ. ಕರಗ ಆಚರಣೆ ವೇಳೆ ದರ್ಗಾಕ್ಕೂ ಭೇಟಿ ನೀಡಲಾಗುತ್ತದೆ. ಧರ್ಮ, ದೇವಾಸ್ಥಾನದ ಹೆಸರಿನಲ್ಲಿ ರಾಜಕಾರಣ ಮಾಡುವುದು ನೀಚತನ. ಇದನ್ನು ಯಾರೂ ಸಹ ಮಾಡಬಾರದು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದೇವೆ. ಅವರು ಯಾರಿಗೆ ಹಣ ನೀಡಬೇಕೋ ಅವರಿಗೆ ಹಣ ನೀಡುತ್ತಾರೆ. ಬಜೆಟ್ ಅಲ್ಲಿಯೇ ಹಣ ಮೀಲಿಟ್ಟಿದ್ದೇವೆ. ಕರಗ ಉತ್ಸವ ಚೆನ್ನಾಗಿ ನಡೆಯಲು ಜಿಲ್ಲಾಧಿಕಾರಿಗಳು, ಪೊಲೀಸರು ಶ್ರಮವಹಿಸಿದ್ದಾರೆ ಎಂದು ತಿಳಿಸಿದರು.

ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವು ಏಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರವಾಗಿ ಅವರುಗಳು ತಮ್ಮ ನಿಲುವುಗಳನ್ನು ಪ್ರತಿಪಾದನೆ ಮಾಡಲಿ ಎಂದು ಹೇಳಿದರು.

ಮುಖ್ಯಮಂತ್ರಿಗಳು ಜಾತಿಗಣತಿ ವರದಿಯ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳಿಗೂ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕಿಂತ ಮುಕ್ತವಾಗಿ ಇನ್ನೇನು ‌ಮಾಡಲು ಸಾಧ್ಯ" ಎಂದರು. ಚುನಾವಣೆ ಪೂರ್ವದಲ್ಲಿ ಒಕ್ಕಲಿಗ ಸಮುದಾಯ ಬೆನ್ನಿಗೆ ನಿಲ್ಲಬೇಕು ಎಂದು ಈ ಹಿಂದೆ ನೀಡಿದ್ದ ಹೇಳಿಕೆ ಬಗ್ಗೆ ಕೇಳಿದಾಗ, "ಅದು ಬೇರೆ ವಿಚಾರ. ಈಗ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದೇನೆ. ಎಲ್ಲರಿಗೂ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ, ಧ್ವನಿ, ಧ್ಯೇಯ, ಉದ್ದೇಶ, ಸಂಕಲ್ಪ ಎಲ್ಲವೂ ಸಹ" ಎಂದರು. ಒಕ್ಕಲಿಗರ ಸಂಖ್ಯೆ 61 ಲಕ್ಷ ತೋರಿಸಲಾಗುತ್ತಿದೆ ಎಂದು ಕೇಳಿದಾಗ, "ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಷ್ಟೇ" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT