ಡಿ.ಕೆ ಶಿವಕುಮಾರ್ ಮತ್ತು ಮುನಿರತ್ನ 
ರಾಜ್ಯ

2,000 ಕೋಟಿ ರೂ ವೆಚ್ಚದ SWD ಕಾಮಗಾರಿಗಳಲ್ಲಿ ಶೇ 15ರಷ್ಟು ಕಮಿಷನ್‌: ಡಿಕೆಶಿ ವಿರುದ್ಧ BJP ಶಾಸಕ ಮುನಿರತ್ನ ಗಂಭೀರ ಆರೋಪ, ರಾಜ್ಯಪಾಲರಿಗೆ ದೂರು

ನಿನ್ನೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ 2,000 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ 15ರಷ್ಟು ಕಮಿಷನ್‌ ಪಡೆದಿದ್ದಾರೆ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ನಿನ್ನೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ್ದಾರೆ. ಜೊತೆಗೆ, ‘ಈ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೆಶನಾಲಯ ಮತ್ತು ಸಿಬಿಐಗೆ ದೂರು ನೀಡಿದ್ದು, ಡಿ.ಕೆ.ಶಿವಕುಮಾರ್‌ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲು ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ರಾಜಾಕಾಲುವೆ ಕಾಮಗಾರಿಗಳ ಟೆಂಡರ್‌ಗಳಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ಆಗಿದೆ. ವರ್ಲ್ಡ್ ಬ್ಯಾಂಕ್‌ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು, ((1) ಸ್ಟಾರ್ ಇನ್ಫ್ರಾಟೆಕ್ ಅಕಾ ಸ್ಟಾರ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ (2) ಗಣಪತಿ ಸ್ಟೋನ್ ಕ್ರಷರ್ ಪ್ರೈವೇಟ್ ಲಿಮಿಟೆಡ್ (3) ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ (4) ಮನು ಕನ್ಸ್ಟ್ರಕ್ಷನ್ಸ್ (5) ಡಿ.ಎಚ್. ​​ಪಟೇಲ್ (6) ಎಲ್ಐಎ ಕನ್ಸ್ಟ್ರಕ್ಷನ್ಸ್ (7) ತಿರುಮಲ ಗಿರಿ ಕನ್ಸ್ಟ್ರಕ್ಷನ್ಸ್ (8) ಓಷನ್ ಕನ್ಸ್ಟ್ರಕ್ಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ (9) ವಿಡಿಬಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ (10) ಆರ್ಎನ್ಎಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮತ್ತು (11) ಬಿಎಸ್ಆರ್ ಕನ್ಸ್ಟ್ರಕ್ಷನ್ಸ್ ಕಂಪನಿಗಳಿಂದ ದೊಡ್ಡ ಮೊತ್ತದ ಕಮಿಷನ್ ಪಡೆದು ಟೆಂಡರ್ ಕೊಡಲಾಗಿದೆ ಎಂದು ಆರೋಪಿಸಿದ್ದಾರೆ.

ಒಟ್ಟು 16 ವರ್ಕ್ ಆರ್ಡರ್‌ಗಳನ್ನು ಈ ಕಂಪನಿಗಳ ಗುತ್ತಿಗೆದಾರರಿಗೆ ಟೆಂಡರ್ ಕೊಟ್ಟಿದ್ದಾರೆ. ಕೆಟಿಟಿಪಿ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ, ದೊಡ್ಡ ದೊಡ್ಡ ಕಂಪನಿಗಳಿಂದ 400 ಕೋಟಿ ರೂ. ಕಮಿಷನ್ ಪಡೆದು ಟೆಂಡರ್ ಕೊಡಲಾಗಿದೆ. ಇದರ ಟೆಂಡರ್ ಅನ್ನು ಅನರ್ಹ ಕಂಪನಿಗಳಿಗೆ ಕೊಡುತ್ತಿದ್ದಾರೆ. ಇದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಕೈವಾಡ ಇದೆ. ಹೀಗಾಗಿ ಈ ಟೆಂಡರ್ ಅವ್ಯವಹಾರವನ್ನು ಇಡಿ ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ,

ವರ್ಲ್ಡ್ ಬ್ಯಾಂಕ್ ಲೋನ್‌ಗೆ ಸಂಬಂಧಿಸಿದಂತೆ 2 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಕಳೆದ ಫೆಬ್ರವರಿಯಲ್ಲಿ ನಾನು ಇಡಿಗೆ ದೂರು ಕೊಟ್ಟಿದ್ದೆ. ಅದಾದ ನಂತರ ಡಿಕೆಶಿ, ಡಿಕೆ ಸುರೇಶ್ ಅಧಿಕಾರಿಗಳನ್ನು, ಗುತ್ತಿಗೆದಾರರನ್ನು ಮನೆಗೆ ಕರೆದಿದ್ದಾರೆ. ಏ.15ಕ್ಕೆ ಟೆಂಡರ್ ಕರೆದಿದ್ದು, ಈ ಗುತ್ತಿಗೆದಾರರ ಕಂಪನಿಗಳಿಗೆ ಅನುಕೂಲ ಆಗುವಂತೆ ಟೆಂಡರ್ ನಿಯಮ ಬದಲಾಯಿಸಲಾಗಿದೆ. ಗುತ್ತಿಗೆದಾರರ ಜೊತೆ ಶಾಮೀಲಾಗಿ 2 ಸಾವಿರ ಕೋಟಿ ರೂ. ಅಕ್ರಮ ಮಾಡುತ್ತಿದ್ದಾರೆ. 400 ಕೋಟಿ ರೂ. ಕಮಿಷನ್ ಪಡೆಯುತ್ತಾರೆ. ಇದನ್ನು ತಡೆಗಟ್ಟಿದರೆ ಸರ್ಕಾರಕ್ಕೆ 400 ಕೋಟಿ ರೂ. ಉಳಿಯಲಿದೆ. ಮಂಗಳವಾರ ಇದರ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ (PIL) ಹಾಕುತ್ತೇವೆ. ಈ ಹಗರಣದ ನೇರ ಹೊಣೆ ಡಿಕೆಶಿ, ಡಿಕೆ ಸುರೇಶ್ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel