ಆರ್. ಅಶೋಕ್ ಸಾಂದರ್ಭಿಕ ಚಿತ್ರ 
ರಾಜ್ಯ

ಸಿದ್ದರಾಮಯ್ಯ ನಿವಾಸದಲ್ಲಿ ಜಾತಿ ಗಣತಿ ಮಾಡಲಾಗಿದೆ: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪ

ಲಕ್ಷಾಂತರ, ಕೋಟ್ಯಂತರ ಮನೆಗಳಿಗೆ ಭೇಟಿ ಮಾಡದೇ ವರದಿ ಕೊಟ್ಟಿದ್ದಾರೆ. ಮನೆಗಳ ಸಮೀಕ್ಷೆ ಮಾಡದೇ ಹೇಗೆ ವರದಿ ಮಾಡಿದರು?.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಜಾತಿ ಗಣತಿ ಮಾಡಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಭಾನುವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದಅವರು, ಮುಖ್ಯಮಂತ್ರಿಗಳು ಆಗಿನ ಹಿಂದುಳಿದ ಆಯೋಗದ ಅಧ್ಯಕ್ಷ ಕಾಂತರಾಜು ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು, ಜಾತಿಗಣತಿ ವರದಿಯನ್ನು ಸಿದ್ಧಪಡಿಸಿದ್ದಾರೆ. ಬಳಿಕ ಕಾಂತರಾಜು ಸಹಿ ಹಾಕದೆ ಓಡಿದ್ದಾರೆ. ಈ ವರದಿಯಲ್ಲಿ ರಹಸ್ಯವೇನೂ ಇಲ್ಲ, ಎಲ್ಲಾ ಜಗಜ್ಜಾಹೀರಾಗಿದೆ. ಜಾತಿ, ಜಾತಿಗಳನ್ನು, ಧರ್ಮ ಧರ್ಮಗಳನ್ನು ಒಡೆಯುವ ವರದಿ. ಜನರನ್ನು ಕೂಡಿಸೋದು ಕಷ್ಟ, ಒಡೆಯೋದು ಸುಲಭ. ಸಿದ್ದರಾಮಯ್ಯ ಒಡೆಯುವುದರಲ್ಲಿ ಎಕ್ಸ್‌ಪರ್ಟ್. ಜಾತಿ, ಧರ್ಮಗಳ ಮಧ್ಯೆ ಒಡಕು ತರುತ್ತಿದ್ದಾರೆ. ಇದು ಸಿದ್ದರಾಮಯ್ಯ ಪ್ರಾಯೋಜಕತ್ವದ ಅವೈಜ್ಞಾನಿಕ ವರದಿ ಎಂದು ವಾಗ್ದಾಳಿ ನಡೆಸಿದರು.

ಲಕ್ಷಾಂತರ, ಕೋಟ್ಯಂತರ ಮನೆಗಳಿಗೆ ಭೇಟಿ ಮಾಡದೇ ವರದಿ ಕೊಟ್ಟಿದ್ದಾರೆ. ಮನೆಗಳ ಸಮೀಕ್ಷೆ ಮಾಡದೇ ಹೇಗೆ ವರದಿ ಮಾಡಿದರು?. ವೀರಶೈವ ಲಿಂಗಾಯತರನ್ನು ಭಾಗ ಮಾಡಿದರು. ಮುಸ್ಲಿಮರನ್ನು ಫೋಕಸ್ ಮಾಡಲಾಗಿದೆ. ಇದರಿಂದ ಏನು ಸಂದೇಶ ಕೊಡುತ್ತಿದ್ದೀರಿ. ನೆಹರೂ ಅವರೂ ಇದೇ ತಪ್ಪು ಮಾಡಿದ್ದರು, ಅಂಬೇಡ್ಕರ್ ಸ್ಪರ್ಧಿಸಿದ್ದ ಕ್ಷೇತ್ರವನ್ನು ಪಾಕಿಸ್ತಾನಕ್ಕೆ ಸೇರಿಸಿದರು. ಲಿಂಗಾಯತರು, ಒಕ್ಕಲಿಗರನ್ನ ಮಾತ್ರ ವಿಭಜಿಸಿದ್ದೀರಿ. ನಿಮಗೆ ಬೇಕಿರುವ ಮುಸ್ಲಿಂ ಸಮುದಾಯವನ್ನು ವಿಭಜಿಸಲಿಲ್ಲ. ಜಾತಿ ಜನಗಣತಿ ವರದಿಗೆ 150 ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ, ಇದೇ ಬೋಗಸ್. ಶಾಮನೂರು ಅವರೇ ನಮ್ಮನೆಗೆ ಬಂದು ಸಮೀಕ್ಷೆ ಮಾಡಿಲ್ಲ ಎಂದು ಹೇಳಿದ್ದರು. ಹಾಗಾದರೆ 150 ಕೋಟಿ ಹೊಡೆದವರು ಯಾರು?. 150 ಕೋಟಿ ಲೂಟಿ ಆಗಿದೆ, ಇದು ಯಾರ ಜೇಬಿಗೆ ಹೋಗಿದೆ ಎಂದು ಪ್ರಶ್ನಿಸಿದರು.

ವರದಿಯಲ್ಲಿ ಮುಸ್ಲಿಮರ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲಾಗಿದೆ. ಇದರ ಹಿಂದೆ ಪಿತೂರಿ ಇದೆ. ಟಿಪ್ಪು ಜಯಂತಿ ಆಚರಿಸಿದ್ದ ಸರ್ಕಾರ ಮುಸ್ಲಿಮರಿಗೆ ರೂ.10,000 ಕೋಟಿ ನೀಡುವ ಭರವಸೆ ನೀಡಿತ್ತು. ಬಳಿಕ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಿತು. ಇದೇ ರೀತಿ ಸಾಕಷ್ಟು ಭರವಸೆಗಳನ್ನು ನೀಡಿದೆ. ಜನರು ಸರ್ಕಾರದ ಉದ್ದೇಶವನ್ನು ಅರ್ಥ ಮಾಡಿಕೊಳ್ಳಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಮಿನಿ ಪಾಕಿಸ್ತಾನ ನಿರ್ಮಾಣವಾಗಲಿದೆ. ವರದಿ ಮೂಲಕ ಸರ್ಕಾರ ಜನರನ್ನು ಒಡೆಯಲು ಯತ್ನಿಸುತ್ತಿದೆ.

ಇಷ್ಟು ವರ್ಷ ರಾಜ್ಯದಲ್ಲಿ ಲಿಂಗಾಯತರ ಸಂಖ್ಯೆ ಹೆಚ್ಚಾಗಿತ್ತು. ಇದೀಗ ಮುಸ್ಲಿಮರ ಸಂಖ್ಯೆ ಹೆಚ್ಚಾಗಿದೆ. ವರದಿ ಮೂಲಕ ಮುಸ್ಲಿಮರನ್ನು ಓಲೈಸಲವು ಯತ್ನಿಸುತ್ತಿದ್ದಾರೆ. ಮುಸ್ಲಿಮರನ್ನು ಶಾಶ್ವತವಾಗಿ ವೋಟ್ ಬ್ಯಾಂಕ್ ಮಾಡಿಕೊಳ್ಳುವ ವರದಿ ಇದು. ಸಿದ್ದರಾಮಯ್ಯ ಕೈಚಳಕದಿಂದ ಮಾಡಿರುವ ವರದಿ ಇದು. ಈಗಲೂ ಸರ್ಕಾರಕ್ಕೆ ಬುದ್ದಿ ಇದ್ದರೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಿ. ಪ್ರತೀ ಮನೆಗೆ ಹೋಗಿ ವರದಿ ಕೊಡಲಿ. ನಾವೇನೂ ಜಾತಿ ಜನಗಣತಿ ವಿರೋಧಿಗಳೇನಲ್ಲ. ಆದರೆ, ಯಾರನ್ನೋ ಓಲೈಕೆ ಮಾಲು, ವೋಟಿಗಾಗಿ ಸಿದ್ದರಾಮಯ್ಯ ಇಷ್ಟು ಕೀಳು ಮಟ್ಟಕ್ಕೆ ಇಳೀತಾರೆ ಎಂದರೆ ಅವರ ಮನಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್​​ನಲ್ಲಿ ಬ್ರಿಟಿಷ್ ಡಿಎನ್ಎ ಬಂದಿದೆ, ಒಡಕು ಮಾಡುವ ಬುದ್ಧಿ ಎಂದು ಟೀಕಿಸಿದರು.

ಜಾತಿ ಗಣತಿ ವರದಿಗೆ ಸಿದ್ದರಾಮಯ್ಯ ಅವರೇ ಡೈರೆಕ್ಟರ್, ಸ್ಕ್ರೀನ್ ಪ್ಲೇಯರ್, ಪ್ರೊಡ್ಯೂಸರ್. ಹನಿಟ್ರ್ಯಾಪ್, 500 ಕೋಟಿ ಕಿಕ್ ಬ್ಯಾಕ್, ಗುತ್ತಿಗೆದಾರರ ಆರೋಪ ವಿಚಾರ ಡೈವರ್ಟ್ ಮಾಡಲು ಈಗ ವರದಿ ಮುನ್ನೆಲೆಗೆ ತಂದಿದ್ದಾರೆ. ಅವರ ಎಲ್ಲ ಹುಳುಕು ಸೈಡ್ ಲೈನ್ ಮಾಡುವ ಉದ್ದೇಶವಿದೆ. ಸಿದ್ದರಾಮಯ್ಯ ತಂತ್ರಗಾರ ಅಲ್ಲ. ಕುತಂತ್ರ ಮಾಡಿಯೇ ಜೆಡಿಎಸ್ ಒಡೆದರು, ಅದಕ್ಕೇ ಅವರನ್ನು ಹೊರಗೆ ಹಾಕಿದರು. ಈಗ ಕಾಂಗ್ರೆಸ್​​ನಿಂದಲೂ ಯಾವಾಗ ಹೊರಗೆ ಹಾಕುತ್ತಾರೋ ಗೊತ್ತಿಲ್ಲ. ಕಾಂಗ್ರೆಸ್‌ನಲ್ಲೇ ಈ ವರದಿಯಿಂದ ದೊಡ್ಡ ದಂಗೆ ಆಗಬಹುದು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT