ಗೃಹ ಸಚಿವ ಜಿ ಪರಮೇಶ್ವರ 
ರಾಜ್ಯ

ಅಪರಾಧ ಕೃತ್ಯಗಳಲ್ಲಿ ವಲಸೆ ಕಾರ್ಮಿಕರು ಭಾಗಿ: ಕಾರ್ಮಿಕ ಇಲಾಖೆಯೊಂದಿಗೆ ಸಭೆ, ಶೂಟೌಟ್ ಬಗ್ಗೆ ತನಿಖೆ

ಬಿಹಾರದ ಪಾಟ್ನಾ ಮೂಲದ 35 ವರ್ಷದ ರಿತೇಶ್ ಕುಮಾರ್ ಎಂಬಾತ ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿದ್ದಾನೆ ಎಂಬ ಆರೋಪದ ಬೆನ್ನಲ್ಲೇ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಇತರ ರಾಜ್ಯಗಳಿಂದ ವಲಸೆ ಬಂದ ಕಾರ್ಮಿಕರನ್ನು ಒಳಗೊಂಡ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರೊಂದಿಗೆ ಗೃಹ ಮತ್ತು ಕಾರ್ಮಿಕ ಇಲಾಖೆಗಳ ಜಂಟಿ ಸಭೆ ನಡೆಸುವುದಾಗಿ ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.

ಇತರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಕಾರ್ಮಿಕ ಬಲವನ್ನು ತಡೆಯಲು ಸಾಧ್ಯವಿಲ್ಲ. ಆದರೆ, ಅವರು ಒಳಗೊಂಡಿರುವ ಅಪರಾಧ ಚಟುವಟಿಕೆಗಳನ್ನು ಗಮನಿಸಿ ಅದರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು.

ಬಿಹಾರದ ಪಾಟ್ನಾ ಮೂಲದ 35 ವರ್ಷದ ರಿತೇಶ್ ಕುಮಾರ್ ಎಂಬಾತ ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿದ್ದಾನೆ ಎಂಬ ಆರೋಪದ ಬೆನ್ನಲ್ಲೇ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ. ಭಾನುವಾರ ರಿತೇಶ್ ಕುಮಾರ್ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.

'ಬೆಂಗಳೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿರುವುದರಿಂದ ಮತ್ತು ದೇಶದ ವಿವಿಧ ಭಾಗಗಳಿಂದ ರಾಜ್ಯಕ್ಕೆ ಕಾರ್ಮಿಕರು ಬರುತ್ತಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ನಾವು ನೋಡುತ್ತೇವೆ. ನಾವು ಈ ಬಗ್ಗೆ ಖಂಡಿತವಾಗಿಯೂ ಗಮನ ಹರಿಸುತ್ತೇವೆ' ಎಂದು ದೇಶದ ಇತರ ಭಾಗಗಳಿಂದ ಬರುವ ಜನರು ಇಂತಹ ಅಪರಾಧಗಳಲ್ಲಿ ಹೆಚ್ಚು ಭಾಗಿಯಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾನು ಕಾರ್ಮಿಕ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಇದನ್ನು ತಡೆಯಲು ನಾವು ಏನು ಮಾಡಬಹುದು ಎಂದು ನೋಡುತ್ತೇನೆ. ವಿವಿಧ ರಾಜ್ಯಗಳಿಂದ ಬರುವ ಕಾರ್ಮಿಕ ಬಲವನ್ನು ನಾವು ತಡೆಯಲು ಸಾಧ್ಯವಿಲ್ಲ. ಆದರೆ, ನಾವು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬಹುದು. ನಾನು ಕಾರ್ಮಿಕ ಸಚಿವರೊಂದಿಗೆ ಚರ್ಚಿಸುತ್ತೇನೆ. ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ನಾವು (ಗೃಹ ಮತ್ತು ಕಾರ್ಮಿಕ ಇಲಾಖೆಗಳ) ಜಂಟಿ ಸಭೆ ನಡೆಸುತ್ತೇವೆ' ಎಂದರು.

ತನಿಖೆಗೆ ಆದೇಶ

ಭಾನುವಾರ ಹುಬ್ಬಳ್ಳಿಯಲ್ಲಿ ಬಿಹಾರದ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಂದ ಘಟನೆಯನ್ನು 'ಭಯಾನಕ' ಎಂದು ಕರೆದ ಗೃಹ ಸಚಿವರು, ಪೊಲೀಸರು ಆರೋಪಿಯನ್ನು ತಕ್ಷಣವೇ ಬಂಧಿಸಿದರು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲು ಆತ ವಾಸಿಸುತ್ತಿದ್ದ ಸ್ಥಳಕ್ಕೆ ಕರೆದೊಯ್ಯುವಾಗ, ಆತ ಇದ್ದಕ್ಕಿದ್ದಂತೆ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಈ ವೇಳೆ ಪೊಲೀಸರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆತ ಸಾವಿಗೀಡಾಗಿದ್ದಾನೆ' ಎಂದು ಹೇಳಿದರು.

'ಸತ್ಯಾಂಶ ಹೊರಬರಲು ಹಿರಿಯ ಅಧಿಕಾರಿಯಿಂದ ತನಿಖೆಗೆ ಆದೇಶಿಸಿದ್ದೇನೆ. ವರದಿ ಬರಲಿ' ಎಂದು ಅವರು ಹೇಳಿದರು.

ಈ ತಿಂಗಳ ಆರಂಭದಲ್ಲಿ ಸುದ್ದುಗುಂಟೆಪಾಳ್ಯದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತನನ್ನು ಕೇರಳದಲ್ಲಿ ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆಗಳು ನಡೆಯಲಿವೆ ಎಂದು ಹೇಳಿದರು.

ವಾರಪೂರ್ತಿ ನಡೆದ ಹುಡುಕಾಟದ ನಂತರ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತಿಲಕ್‌ನಗರ ಬಳಿಯ ಗುಲ್ಬರ್ಗ ಕಾಲೋನಿಯ ನಿವಾಸಿ ಸಂತೋಷ್ ಡಿ (29) ಎಂಬ ವ್ಯಕ್ತಿಯನ್ನು ಕೇರಳದ ಕೋಯಿಕ್ಕೋಡ್‌ನಲ್ಲಿ ಬಂಧಿಸಲಾಗಿದೆ ಎಂದು ನಗರ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಶಂಕಿತ ಬ್ರೂಕ್‌ಫೀಲ್ಡ್ ಬಳಿಯ ಆಟೋಮೊಬೈಲ್ ಶೋ ರೂಂನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT