ವಕೀಲೆ ಜೀವಾ-ಕನಕಲಕ್ಷ್ಮೀ 
ರಾಜ್ಯ

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: DYSP ​ಕನಕಲಕ್ಷ್ಮೀ ಕಿರುಕುಳ ಸಾಬೀತು; 2,300 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

ಐಪಿಎಸ್​ ಅಧಿಕಾರಿಗಳಾದ ವಿನಾಯಕ್ ವರ್ಮಾ, ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ವಿಶೇಷ ತನಿಖಾ ತಂಡದಿಂದ ವರದಿ ಸಲ್ಲಿಕೆ ಮಾಡಲಾಗಿದೆ.

ಬೆಂಗಳೂರು: ಭೋವಿ ನಿಗಮ ಹಗರಣ ಸಂಬಂಧ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು ಇದೀಗ ಒಟ್ಟು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದು, ವರದಿಯನ್ನು ಹೈಕೋರ್ಟ್​​ಗೆ ಸಲ್ಲಿಸಿದ್ದಾರೆ.

ಐಪಿಎಸ್​ ಅಧಿಕಾರಿಗಳಾದ ವಿನಾಯಕ್ ವರ್ಮಾ, ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ವಿಶೇಷ ತನಿಖಾ ತಂಡದಿಂದ ವರದಿ ಸಲ್ಲಿಕೆ ಮಾಡಲಾಗಿದೆ.

ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ವರದಿ ನೀಡಿದ್ದು, ಜೀವಾಗೆ ಡಿವೈಎಸ್​ಪಿ ಕನಕಲಕ್ಷ್ಮೀ ಕಿರುಕುಳ, ಹಿಂಸೆ ನೀಡಿರೋದು ಸಾಬೀತಾಗಿದೆ.

ಡಿಸೆಂಬರ್​​ನಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಸದ್ಯ ಹೈಕೋರ್ಟ್​ ಸೂಚನೆಯಂತೆ ಎಸ್ಐಟಿಯಿಂದ ವರದಿ ಸಲ್ಲಿಕೆ ಮಾಡಿದೆ.

ನ.22ರಂದು ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ವಕೀಲೆ ಜೀವಾ ಆತ್ಮಹತ್ಯೆ ನಡೆದಿತ್ತು. DySP ಕನಕಲಕ್ಷ್ಮೀ ಕಿರುಕುಳದ ಬಗ್ಗೆ 13 ಪುಟಗಳ ಡೆತ್​ನೋಟ್​​ನಲ್ಲಿ ಜೀವಾ ಬರೆದಿದ್ದರು. ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತುದ್ದಂತೆ ಬನಶಂಕರಿ ಠಾಣೆಯಿಂದ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಿತ್ತು. ಬಳಿಕ ಹೈಕೋರ್ಟ್​ ಸಿಬಿಐ ಅಧಿಕಾರಿಗಳನ್ನೂ ಒಳಗೊಂಡಂತೆ ಎಸ್ಐಟಿ ರಚಿಸಿತ್ತು. ಮಾ.11ರಂದು ಎಸ್ಐಟಿ ಕನಕಲಕ್ಷ್ಮೀ ಅವರನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಇದೀಗ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಕೆ ಮಾಡಿದೆ.

ಜೀವಾ ವಿಚಾರಣೆ ವೇಳೆ ಚಿತ್ರೀಕರಿಸಲಾಗಿದ್ದ ಕೆಲವು ವಿಡಿಯೋ ಡಿಲೀಟ್ ಆಗಿದ್ದವು. ಜೀವಾರನ್ನು ವಿವಸ್ತ್ರಗೊಳಿಸಿರುವುದು, ಇತರೆ ಕೆಲ ವಿಡಿಯೋಗಳು ಇರಲಿಲ್ಲ. ಎಫ್​ಎಸ್​ಎಲ್​ ಮೂಲಕ ಮರು ಸಂಗ್ರಹಿಸಿದಾಗ ಆ ವಿಡಿಯೋಗಳು ಪತ್ತೆಯಾದವು. ಡೆತ್​ನೋಟ್​ನಲ್ಲಿ ಜೀವಾ ಮಾಡಿದ್ದ ಬಹುತೇಕ ಆರೋಪಗಳು ಸಾಬೀತಾಗಿದೆ.

ಕನಕಲಕ್ಷ್ಮಿ ಅವರು ವಿಚಾರಣೆ ನೆಪದಲ್ಲಿ ವಕೀಲೆ ಜೀವಾ ಅವರಿಗೆ ಕಿರುಕುಳ ಹಾಗೂ ಚಿತ್ರಹಿಂಸೆ ನೀಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

ಪ್ರಕರಣ ಸಂಬಂಧ ಜೀವಾ ಅವರ ಸಹೋದರಿ ಸಂಗೀತಾ, ಕನಕಲಕ್ಷ್ಮಿ ತಂಡದಲ್ಲಿದ್ದ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ 80ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಪಡೆಯಲಾಗಿದೆ.

ಕನಕಲಕ್ಷ್ಮೀ ಅವರು ಪ್ರಕರಣದ ತನಿಖೆಯನ್ನು ವೈಯಕ್ತಿಕವಾಗಿ ಪರಿಗಣಿಸಿ ಜೀವಾ ಮೇಲೆ ಹಲ್ಲೆ ನಡೆಸಿ, ಚಿತ್ರಹಿಂಸೆ ಕೊಟ್ಟಿದ್ದರು. ಅಲ್ಲದೆ, 25 ಲಕ್ಷ ರೂ. ಲಂಚ ಕೊಡುವಂತೆ ಬೆದರಿಸಿದ್ದರು ಎಂದು ಎಸ್‌ಐಟಿ ಅಧಿಕಾರಿಗಳು ಆರೋಪಪಟ್ಟಿಯಲ್ಲಿ ಹೇಳಿದ್ದಾರೆ.

ಜೀವಾ ಅವರು ಬರೆದಿಟ್ಟಿದ್ದ ಡೆತ್‌ನೋಟ್‌ನ ಪುಟಗಳು, ಕನಕಲಕ್ಷ್ಮಿ ಅವರು ಜೀವಾ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಚಿತ್ರಹಿಂಸೆ ನೀಡಿರುವುದಕ್ಕೆ ಸಂಬಂಧಪಟ್ಟ ವಿಡಿಯೋ ಸಾಕ್ಷ್ಯಗಳು, ನಕಲಿ ದಾಖಲೆಗಳನ್ನು ಅಧಿಕಾರಿಗಳು ಆರೋಪಪಟ್ಟಿಯ ಜತೆ ಕೋರ್ಟ್‌ಗೆ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?

ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದಿಂದ ಭೋವಿ ಉದ್ಯಮಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ 2021 ಮತ್ತು 2022ರಲ್ಲಿ ಅವ್ಯವಹಾರ ನಡೆದಿತ್ತು. ನಿಗಮದ ಅಧಿಕಾರಿಗಳು ಸಾಲ ನೀಡುವ ನೆಪದಲ್ಲಿ ಜೀವಾ ಅವರ ಮಾಲೀಕತ್ವದ ಅನ್ನಿಕಾ ಎಂಟರ್‌ಪ್ರೈಸಸ್‌ಗೆ ಅಕ್ರಮವಾಗಿ 7.16 ಕೋಟಿ ರೂ. ಮತ್ತು ಅವರ ಸಹೋದರಿಯ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ ಸಂಸ್ಥೆಗೆ 3.79 ಕೋಟಿ ರೂ. ವರ್ಗಾಯಿಸಿದ್ದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಲೀಲಾವತಿ ಹಾಗೂ ಪ್ರಧಾನ ವ್ಯವಸ್ಥಾಪಕರಾಗಿದ್ದ ಡಾ. ಬಿ.ಕೆ. ನಾಗರಾಜಪ್ಪ ಮತ್ತು ಅವರ ಆಪ್ತರು ಪಾಲುದಾರರಾಗಿದ್ದ ನ್ಯೂ ಕ್ರೀಮ್, ಆದಿತ್ಯಾ ಕಂಪನಿ, ಸೋಮೇಶ್ವರ ಎಂಟರ್‌ಪ್ರೈಸಸ್‌ ಸೇರಿದಂತೆ ಸಾಕಷ್ಟು ನಕಲಿ ಕಂಪನಿಗಳಿಗೆ ಅಕ್ರಮವಾಗಿ ಹಣ ವರ್ಗಾಯಿಸಲಾಗಿತ್ತು. ಹಗರಣ ಸಂಬಂಧ 2023ರಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ ಸೇರಿದಂತೆ ಹಲವೆಡೆ ಪ್ರಕರಣ ದಾಖಲಾಗಿದ್ದವು. ಬಳಿಕ ಸರಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು. ಸಿಐಡಿಯ ಎಸ್‌ಐಟಿಗೆ ಡಿವೈಎಸ್ಪಿ ಕನಕಲಕ್ಷ್ಮೀ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿತ್ತು.

ಬಳಿಕ ಭೋವಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರೋಪಿಯಾಗಿದ್ದ ಜೀವಾ ಅವರನ್ನು ಕನಕಲಕ್ಷ್ಮಿ ಅವರು ವಿಚಾರಣೆ ನಡೆಸಿದ್ದರು. ಬಳಿಕ ಜೀವಾ ಅವರು ಬನಶಂಕರಿಯ ರಾಘವೇಂದ್ರ ಲೇಔಟ್‌ನ ಮನೆಯಲ್ಲಿ 2024ರ ನ.22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಡಿವೈಎಸ್‌ಪಿ ಕನಕಲಕ್ಷ್ಮಿ ಅವರ ಕಿರುಕುಳ ಮತ್ತು ಚಿತ್ರಹಿಂಸೆಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಪತ್ರ ಬರೆದಿಟ್ಟಿದ್ದರು.ಬಳಿಕ ಜೀವಾ ಅವರ ಸಹೋದರಿ ಸಂಗೀತಾ ಅವರು ಕನಕಲಕ್ಷ್ಮಿ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಹೈಕೋರ್ಟ್‌ ಪ್ರಕರಣದ ತನಿಖೆಗೆ ಸಿಬಿಐ ಎಸ್‌ಪಿ ವಿನಾಯಕ್‌ ವರ್ಮಾ, ಸಿಸಿಬಿ ಡಿಸಿಪಿ ಅಕ್ಷಯ್‌ ಮಚಿಂದ್ರ, ನಿಶಾ ಜೇಮ್ಸ್‌ ಅವರನ್ನು ಒಳಗೊಂಡ ಎಸ್‌ಐಟಿ ರಚಿಸಿತ್ತು. ಡಿವೈಎಸ್‌ಪಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT