ಅಂಬೇಡ್ಕರ್ ಜಯಂತಿಯಲ್ಲಿ ಡಿ.ಕೆ ಶಿವಕುಮಾರ್ 
ರಾಜ್ಯ

ಸಂವಿಧಾನವೇ ನಮ್ಮ ದೇಶದ ಏಕೈಕ ರಾಷ್ಟ್ರೀಯ ಗ್ರಂಥ: ಡಿ.ಕೆ ಶಿವಕುಮಾರ್

ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರೆಯಬೇಕು ಎಂದು ಸಂವಿಧಾನ ಕೊಟ್ಟ ಧೀಮಂತ ವ್ಯಕ್ತಿ. ನಾವು ಅಂಬೇಡ್ಕರ್ ಅವರ ಪ್ರತಿಮೆಗೆ ಪೂಜೆ ಮಾಡುವುದಕ್ಕಿಂತ ಪ್ರತಿಭೆಗೆ ಪೂಜೆ ಮಾಡಬೇಕು.

ಬೆಂಗಳೂರು: ಪ್ರಪಂಚದ ಅನೇಕ ರಾಷ್ಟ್ರಗಳು, ನಾಯಕರು ಹೆಚ್ಚು ಗೌರವ ನೀಡುವುದು ನಮ್ಮ ಅಂಬೇಡ್ಕರ್ ಅವರು ರಚಿಸಿದ ಸಂವಿಧಾ‌‌ನಕ್ಕೆ. ನಮ್ಮ ದೇಶದ ಏಕೈಕ ರಾಷ್ಟ್ರೀಯ ಗ್ರಂಥ. ಭಾರತಕ್ಕೆ ಸಂವಿಧಾನ ಎನ್ನುವ ಆತ್ಮ ನೀಡಿದ ಪರಮಾತ್ಮ ಡಾ.ಬಿ.ಆರ್.ಅಂಬೇಡ್ಕರ್ ಅವರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು.

ನಗರದ ದೊಮ್ಮಲೂರಿನಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೋಮವಾರ ಅನಾವರಣಗೊಳಿಸಿ ಮಾತನಾಡಿದರು.

ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರೆಯಬೇಕು ಎಂದು ಸಂವಿಧಾನ ಕೊಟ್ಟ ಧೀಮಂತ ವ್ಯಕ್ತಿ. ನಾವು ಅಂಬೇಡ್ಕರ್ ಅವರ ಪ್ರತಿಮೆಗೆ ಪೂಜೆ ಮಾಡುವುದಕ್ಕಿಂತ ಪ್ರತಿಭೆಗೆ ಪೂಜೆ ಮಾಡಬೇಕು. ಜನಸಂಖ್ಯೆಯ ಆಧಾರದ ಮೇಲೆ ನಮ್ಮ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಅನುದಾನ ಮೀಸಲಿಡಲಾಗಿದೆ. ಗುತ್ತಿಗೆಯಲ್ಲಿ ಅವಕಾಶ ನೀಡಲಾಗಿದೆ. ಪಾವಗಡದ ಸೌರ ಪಾರ್ಕ್ ನಿರ್ಮಾಣದ ವೇಳೆಯಲ್ಲಿಯೂ ಮೀಸಲಾತಿ ನೀಡಲಾಯಿತು. ಈ ಮೂಲಕ ಅಂಬೇಡ್ಕರ್ ಅವರ ಆಶಯಗಳಿಗೆ ಗೌರವ ನೀಡಿದ್ದೇವೆ. ಶೋಷಿತರನ್ನು ಉದ್ಯಮಿಗಳನ್ನಾಗಿ ಮಾಡುವುದು ನಮ್ಮ ಉದ್ದೇಶ ಎಂದರು.

ಸಂವಿಧಾನ ರಕ್ಷಣೆಯ ಬಗ್ಗೆ ಏಕೆ ನಾವೆಲ್ಲರು ಇಷ್ಟು ಮಾತನಾಡುತ್ತೇನೆ ಎಂದರೆ, ನಾವು ಮಾತನಾಡಲು ರಕ್ಷಣೆ ನೀಡುತ್ತದೆ. ಬದುಕಿಗೆ, ಆಸ್ತಿಗೆ ಸೇರಿದಂತೆ ನಮ್ಮ ಜೀವನದ ಪ್ರತಿಯೊಂದು ಹಂತದಲ್ಲಿಯೂ ಸಂವಿಧಾನ ರಕ್ಷಣೆ ನೀಡುತ್ತದೆ. ನ್ಯಾಯ ಒದಗಿಸುವುದೇ ನಮ್ಮ ಸಂವಿಧಾನದ ಮೂಲಮಂತ್ರ. ಸಂವಿಧಾನವೇ ನಮ್ಮ ತಂದೆ, ತಾಯಿ, ಸಂವಿಧಾನವೇ ಬಂಧು ಬಳಗ, ಅಂಬೇಡ್ಕರ್ ಅವರ ಮಾತಿಗೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು” ಎಂದು ಹೇಳಿದರು.

ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಸಾಕಷ್ಟು ಹೋರಾಟ ನಡೆಸಿದವರು ಬಾಬಾ ಸಾಹೇಬರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡುವಾಗ ಸಂವಿಧಾನದ ಪ್ರತಿ ಹಿಡಿದುಕೊಂಡು ಇತಿಹಾಸ ಸೃಷ್ಟಿ ಮಾಡಿದರು. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡಾಗ ಹಿರಿಯ ನಾಯಕರಾದ ರೆಹಮಾನ್ ಖಾನ್ ಅವರಿಂದ ಸಂವಿಧಾನ ಪೀಠಿಕೆ ಓದಿಸಿ ಅಧಿಕಾರ ಸ್ವೀಕಾರ ಮಾಡಿದೆ” ಎಂದರು.

ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬರಿಗೆ ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿತು. ಚುನಾವಣೆ ಸೋತಾಗ ಅಂಬೇಡ್ಕರ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಾನೂನು ಮಂತ್ರಿಯನ್ನಾಗಿ ಮಾಡಿದಾಗ ಅವರು ಕೇವಲ ಪರಿಶಿಷ್ಟರ ಪರವಾಗಿ ಕೆಲಸ ಮಾಡಲಿಲ್ಲ. ಸಮಾಜದ‌ ಎಲ್ಲರ ಪರವಾಗಿ ಕೆಲಸ ಮಾಡಿದರು. ಕುವೆಂಪು ಅವರು ಹೇಳಿದಂತೆ ಸರ್ವರಿಗೂ ಸಮಬಾಳು,‌ ಸಮಪಾಲು ಎನ್ನುವ ತತ್ವಕ್ಕೆ ಸತ್ವ ನೀಡಿದವರು ಬಾಬಾ ಸಾಹೇಬರು ಎಂದು ಹೇಳಿದರು.

ಶಾಂತಿನಗರ ಕ್ಷೇತ್ರದ ಶಾಸಕರಾದ ಹ್ಯಾರಿಸ್ ಅವರು ಅತ್ಯಂತ ಶ್ರದ್ದೆಯಿಂದ ಕೆಲಸ ಮಾಡುತ್ತಿದ್ದಾರೆ. ಇದೊಂದೆ ಕ್ಷೇತ್ರದಲ್ಲಿ ಮಕ್ಕಳ ಶಿಕ್ಷಣಕ್ಕೆ ಎಂದೇ ರೂ.50 ಕೋಟಿ ಖರ್ಚು ಮಾಡಲಾಗುತ್ತಿದೆ. ನೂತನ ಆಸ್ಪತ್ರೆಯನ್ನೂ ನಿರ್ಮಾಣ ಮಾಡಲಾಗುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT