ಮಗಳ ಕಳೆದುಕೊಂಡು ರೋಧಿಸುತ್ತಿರುವ ಪೋಷಕರು 
ರಾಜ್ಯ

ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್: ಮರಣೋತ್ತರ ಪರೀಕ್ಷೆಯಲ್ಲಿ ಕಾಮುಕನ ಕುಕೃತ್ಯ ಬಯಲು

ಬಾಲಕಿಯ ಖಾಸಗಿ ಭಾಗಗಳಲ್ಲಿ ಗಾಯಗಳು ಕಂಡು ಬಂದಿದ್ದು, ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡ ಬಳಿಕ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿದೆ.

ಹುಬ್ಬಳ್ಳಿ: 5 ವರ್ಷದ ಬಾಲಕಿಯ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು,ಬಾಲಕಿಯ ಮರಣೋತ್ತರ ಪರೀಕ್ಷೆಯಲ್ಲಿ ಕಾಮುಕನ ಕುಕೃತ್ಯ ಬಯಲಾಗಿದೆ.

ಪ್ರಕರಣ ಸಂಬಂಧ ಆರಂಭದಲ್ಲಿ ಮೃತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಆದರೆ, ಈವರೆಗೂ ಪೊಲೀಸರು ಅಧಿಕೃತವಾಗಿ ದೃಢಪಡಿಸಿರಲಿಲ್ಲ. ಇದೀಗ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿ ಹೊರ ಬಂದಿದ್ದು, ಇದರಲ್ಲಿ ಬಾಲಕಿ ಮೇಲೆ ಆ ಪಾತಕಿ ಅತ್ಯಾಚಾರ ನಡೆಸಿರುವುದಕ್ಕೆ ಸಾಕ್ಷಿಗಳು ಸಿಕ್ಕಿವೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ನಂತರ ಕೊಲೆ ಮಾಡಿದ್ದಾನೆ. ಬಾಲಕಿಯ ಲೆಗ್ಗಿನ್ಸ್ ನ್ನು ತನ್ನ ಪ್ಯಾಂಟಿನಲ್ಲಿ ಇಟ್ಟುಕೊಂಡು, ವಿಕೃತ ಕಾಮಿಯಂತೆ ವರ್ತಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ. ಮರಣೋತ್ತರ ಪರೀಕ್ಷಾ ವರದಿ ಅಧಿಕೃತವಾಗಿ ಹೊರಬರಬೇಕಿದೆ.

ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸೋಮವಾರ ಮೃತ ಬಾಲಕಿಯ ಪೋಷಕರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಾಲಕಿಯ ಖಾಸಗಿ ಭಾಗಗಳಲ್ಲಿ ಗಾಯಗಳು ಕಂಡು ಬಂದಿದ್ದು, ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡ ಬಳಿಕ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿದೆ. ಪ್ರಸ್ತುತ ಮಾದರಿಯನ್ನು ಎಫ್ಎಸ್ಎಲ್'ಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತಾ ಅಂಶಗಳ ಕುರಿತು ಜಾಗೃತಿ ಅಭಿಯಾನಗಳನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಉಪ ಆಯುಕ್ತರು ಮತ್ತು ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆಯುತ್ತೇನೆ. ಸಿಸಿಟಿವಿ ದೃಶ್ಯಾವಳಿಗಳು ಈ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಸಹಾಯ ಮಾಡಿದೆ. ಹೀಗಾಗಿ ನಗರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಮತ್ತು ಬೆಳಕಿನ ವ್ಯವಸ್ಥೆಯನ್ನು ಸುಧಾರಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ನಡುವೆ ದೇವಾಂಗ್‌ಪೇಟೆಯ ಸ್ಮಶಾನದಲ್ಲಿ ಬಾಲಕಿಯ ಅಂತ್ಯ ಸಂಸ್ಕಾರ ನಡೆಸಲಾಗಿದ್ದು, ಭಾರೀ ಸಂಖ್ಯೆಯಲ್ಲಿ ಸ್ಥಳ ಸೇರಿದ್ದ ಜನರು ಕಣ್ಣೀರಿಟ್ಟರು.

ಇದಕ್ಕೂ ಮೊದಲು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮತ್ತು ಉಪ ಆಯುಕ್ತ ದಿವ್ಯಾ ಪ್ರಭು ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿದರು.

ಇದು ನಾಗರಿಕ ಸಮಾಜವನ್ನು ನಾಚಿಕೆಪಡಿಸುವ ಘಟನೆಯಾಗಿದೆ ಎಂದ ಅವರು, ಪೊಲೀಸರ ತ್ವರಿತ ಕ್ರಮವನ್ನು ಶ್ಲಾಘಿಸಿದರು.

ಇದು ಸಮಾಜದ ಆತ್ಮಸಾಕ್ಷಿಯನ್ನು ಅಲುಗಾಡಿಸುವ ಭಯಾನಕ ಅಪರಾಧ. ಪುಟ್ಟ ಹುಡುಗಿಯ ದೇಹವನ್ನು ನೋಡುವುದು ಸಹ ಅಸಹನೀಯ. ಇಂತಹ ಕ್ರೌರ್ಯವು ನೋವನ್ನುಂಟುಮಾಡುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT