ಅಪಘಾತಕ್ಕೊಳಗಾದ ಕಾರು 
ರಾಜ್ಯ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ: 3 ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಸಾವು

ಬೆಂಗಳೂರಿನಿಂದ ಮೈಸೂರು ಕಡೆಗೆ ವೇಗವಾಗಿ ಬರುತ್ತಿದ್ದ ಹೋಂಡಾ ಸಿವಿಕ್ ಕಾರಿನ ಚಾಲಕ, ಲಂಬಾಣಿ ತಾಂಡ್ಯದ ಬಳಿ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕದ ಮೇಲೆ ಕಾರು ಹತ್ತಿಸಿದ್ದಾನೆ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 10 ಮಂದಿಗೆ ಗಂಭೀರ ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡ್ಯದ ಬಳಿ ನಡೆದಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.

ಬೆಂಗಳೂರಿನಿಂದ ಮೈಸೂರು ಕಡೆಗೆ ವೇಗವಾಗಿ ಬರುತ್ತಿದ್ದ ಹೋಂಡಾ ಸಿವಿಕ್ ಕಾರಿನ ಚಾಲಕ, ಲಂಬಾಣಿ ತಾಂಡ್ಯದ ಬಳಿ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕದ ಮೇಲೆ ಕಾರು ಹತ್ತಿಸಿದ್ದಾನೆ. ಕಾರು ಪಲ್ಟಿಯಾಗಿ ಪಕ್ಕದ ರಸ್ತೆಗೆ ಜಿಗಿದು, ಬೆಂಗಳೂರು ಕಡೆಗೆ ಹೋಗುತ್ತಿದ್ದ ಮಾರುತಿ ಡಿಸೈರ್ ಮತ್ತು ವ್ಯಾಗನರ್ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೂರೂ ಕಾರುಗಳಲ್ಲಿದ್ದ 10 ಮಂದಿಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ನೆರವಿನಿಂದ ಅಂಬುಲೆನ್ಸ್‌ನಲ್ಲಿ ಗಾಯಾಳುಗಳನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

SCROLL FOR NEXT