ರಿಹ್ಯಾಬ್ ಸೆಂಟರ್ ನಲ್ಲಿ ರೋಗಿ ಮೇಲೆ ಹಲ್ಲೆ 
ರಾಜ್ಯ

Video: ರಿಹಾಬ್ ಸೆಂಟರ್ ಗೆ ಸೇರಿಸೋ ಮುನ್ನ ಎಚ್ಚರ..; ವ್ಯಕ್ತಿ ಮೇಲೆ ಮನಸೋ ಇಚ್ಛೆ ಹಲ್ಲೆ!

ವೈರಲ್ ಆಗಿರುವ ವಿಡಿಯೋ ಪ್ರಕಾರ, ರೋಗಿಯನ್ನು ಕೋಣೆಯಲ್ಲಿ ಮೂಲೆಗೆ ಸೇರಿಸಿಕೊಂಡು ವ್ಯಕ್ತಿಯೊಬ್ಬ ಕೋಲಿನಿಂದ ನಿರಂತರವಾಗಿ ಹೊಡೆಯುತ್ತಿದ್ದಾನೆ.

ಬೆಂಗಳೂರು: ಖಾಸಗಿ ಪುನರ್ವಸತಿ ಕೇಂದ್ರ(REHAB CENTER)ವೊಂದರಲ್ಲಿ ರೋಗಿಯೊಬ್ಬರ ಮೇಲೆ ಅಲ್ಲಿನ ಸಿಬ್ಬಂದಿ ಮನಸೋ ಇಚ್ಛೆ ಥಳಿಸಿರುವ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಪುನರ್ವಸತಿ ಕೇಂದ್ರದವಾರ್ಡನ್ ಬಟ್ಟೆ ಒಗೆಯಲು ಮತ್ತು ಶೌಚಾಲಯ ಸ್ವಚ್ಛಗೊಳಿಸಲು ನಿರಾಕರಿಸಿದ ಕಾರಣ, ಸಿಬ್ಬಂದಿ ರೋಗಿಯೊಬ್ಬನನ್ನು ಥಳಿಸಿದ್ದಾರೆ.

ಬೆಂಗಳೂರಿನ ಹೊರವಲಯದಲ್ಲಿರುವ ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಪುನರ್ವಸತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ವೈರಲ್ ಆಗಿರುವ ವಿಡಿಯೋ ಪ್ರಕಾರ, ರೋಗಿಯನ್ನು ಕೋಣೆಯಲ್ಲಿ ಮೂಲೆಗೆ ಸೇರಿಸಿಕೊಂಡು ವ್ಯಕ್ತಿಯೊಬ್ಬ ಕೋಲಿನಿಂದ ನಿರಂತರವಾಗಿ ಹೊಡೆಯುತ್ತಿದ್ದಾನೆ. ಆದರೆ ಇದೇ ಸಂದರ್ಭದಲ್ಲಿ ಅವನ ಪಕ್ಕದ್ದಲೇ ಇದ್ದ ಇತರರು ಪಕ್ಕದಲ್ಲಿ ಸುಮ್ಮನೆ ನೋಡುತ್ತಿದ್ದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ, ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ದೃಢಪಡಿಸಿದರು.

ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್