ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: Online Gaming ವ್ಯಸನಕ್ಕೆ ಬಿದ್ದ ಡಿಪ್ಲೊಮೊ ವಿದ್ಯಾರ್ಥಿ; ತನ್ನದೇ ಕುಟುಂಬದ ಮೂವರಿಗೆ ಚಾಕು ಇರಿತ!

ಆರೋಪಿ ಹರ್ಷ ಇತ್ತೀಚೆಗೆ ಡಿಪ್ಲೊಮೊ ಮುಗಿಸಿದ್ದ. ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ, ಮನೆಯಲ್ಲಿ ಮಲಗಿದ್ದ ತನ್ನ ತಂದೆ, ತಾಯಿ ಮತ್ತು ಸಹೋದರಿಗೆ ಚಾಕುವಿನಿಂದ ಇರಿದಿದ್ದಾನೆ.

ಬೆಂಗಳೂರು: ಆನ್ ಲೈನ್ ಗೇಮಿಂಗ್ ವ್ಯಸನಕ್ಕೆ ಬಿದ್ದ ಡಿಪ್ಲೊಮೊ ವಿದ್ಯಾರ್ಥಿಯೊೂಬ್ಬ ತನ್ನ ಕುಟುಂಬದ ಮೂವರಿಗೆ ಚಾಕು ಇರಿದ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದ ತನ್ನ ತಂದೆ, ತಾಯಿ ಮತ್ತು ಸಹೋದರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ

ಕೃಷ್ಣಮೂರ್ತಿ (51), ಅವರ ಪತ್ನಿ ಪಾರ್ವತಮ್ಮ (48) ಮತ್ತು ನಯನಾ (24) ಹಲ್ಲೆಯಿಂದ ಗಾಯಗೊಂಡಿದ್ದಾರೆ. ಆರೋಪಿ ಹರ್ಷ ಇತ್ತೀಚೆಗೆ ಡಿಪ್ಲೊಮಾ ಮುಗಿಸಿದ್ದ. ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ, ಹರ್ಷ ತನ್ನ ತಂದೆ, ತಾಯಿ ಮತ್ತು ಸಹೋದರಿಯನ್ನುಚಾಕುವಿನಿಂದ ಇರಿದಿದ್ದಾನೆ.

ಹರ್ಷನನ್ನು ತಡೆಯಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ, ಅವನ ನಡವಳಿಕೆ ಅಸಹಜವಾಗಿತ್ತು ಎಂದು ಸಂತ್ರಸ್ತರು ತಿಳಿಸಿದ್ದಾರೆ. ಆತನಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ, ಪೋಷಕರು ಅವನ ಮುಖದ ಮೇಲೆ ಮೆಣಸಿನ ಪುಡಿ ಎರಚಿದ್ದಾರೆ. ಈ ಮಧ್ಯೆ, ಅವರ ಕಿರುಚಾಟ ಕೇಳಿ, ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿ, ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು, ನಯನಾಗೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಷನನ್ನು ಅದೇ ದಿನ ಬಂಧಿಸಲಾಯಿತು. ಅವನು ಆನ್‌ಲೈನ್ ಗೇಮಿಂಗ್‌ಗೆ ವ್ಯಸನಿಯಾಗಿದ್ದನೆಂದು ಆರೋಪಿಸಲಾಗಿದೆ, ಡಿಪ್ಲೊಮೊ ಮುಗಿಸಿದ ನಂತರ ಮನೆಯಲ್ಲಿಯೇ ಇದ್ದ, ಜೊತೆಗೆ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದಿದ್ದರಿಂದ ಪೋಷಕರು ಆತನಿಗೆ ಬೈಯ್ದು ಬುದ್ದಿ ಹೇಳಿದ್ದರು. ಹಲ್ಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಸೆಕ್ಷನ್ 307 (ಕೊಲೆ ಪ್ರಯತ್ನ) ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿಯ ಮಾನಸಿಕವಾಗಿ ಸ್ಥಿರನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video