ಬೆಂಗಳೂರಿನಲ್ಲಿ ಭಾರಿ ಮಳೆ ( ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ: ಬೆಂಗಳೂರು ಸೇರಿದಂತೆ ಕೆಲವೆಡೆ ಮುಂದಿನ ಐದು ದಿನ ಮಳೆ- IMD ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಏಪ್ರಿಲ್ 17, ಗುರುವಾರವೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ನಗರದಲ್ಲಿ ಭಾರೀ ಮಳೆಯಿಂದಾಗಿ ಸಂಚಾರಕ್ಕೆ ಅಡ್ಡಿಯಾಗಿದೆ,

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರ್ಭಟ ಇನ್ನೂ ಮುಂದುವರಿಯಲಿದೆ. ಚಂಡಮಾರುತದ ಹಿನ್ನಲೆ, ಇಂದು 18 ಜಿಲ್ಲೆಗಳಿಗೆ ಮಳೆಯಾಗಲಿದೆ. ನಾಳೆಯಿಂದ ಮಳೆ ಪ್ರಮಾಣ ಕಡಿಮೆಯಾದರೂ ಕೆಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಏಪ್ರಿಲ್ 17, ಗುರುವಾರವೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ನಗರದಲ್ಲಿ ಭಾರೀ ಮಳೆಯಿಂದಾಗಿ ಸಂಚಾರಕ್ಕೆ ಅಡ್ಡಿಯಾಗಿದೆ, ಹವಾಮಾನ ವೈಪರೀತ್ಯದಿಂದಾಗಿ ಹಲವಾರು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶಿವಮೊಗ್ಗ, ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನವಿರುತ್ತದೆ.

ಏಪ್ರಿಲ್ 16-19 ರವರೆಗೆ ನಗರವು ಪ್ರಧಾನವಾಗಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 16 ರ ಬುಧವಾರ ಭಾಗಶಃ ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿತ್ತು. ಬುಧವಾರದಿಂದ ಮುಂದಿನ ಮೂರು ದಿನಗಳವರೆಗೆ (ಏಪ್ರಿಲ್ 17,18,19), ಮೋಡ ಕವಿದ ವಾತಾವಾರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT