ಲಕ್ಷ್ಮಿ ಹೆಬ್ಬಾಳ್ಕರ್  
ರಾಜ್ಯ

ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: 3 ತಿಂಗಳ ನಂತರ ಕ್ಯಾಂಟರ್ ಚಾಲಕನ ಬಂಧನ

ಜ.14 ರಂದು ಬೆಳಗ್ಗಿನ ಜಾವ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಲಾರಿ ಚಾಲಕ ಪರಾರಿಯಾಗಿದ್ದ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ಸಂಭವಿಸಿತ್ತು.

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಮಧುಕರ ಕೊಂಡಿರಾಮ ಸೋಮವಂಶ (65) ಬಂಧಿತ ಆರೋಪಿ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಅಪಘಾತ ಎಸಗಿದ ಲಾರಿಯನ್ನೂ ಸಹ ಕಿತ್ತೂರು ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.

ಜ.14 ರಂದು ಬೆಳಗ್ಗಿನ ಜಾವ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಲಾರಿ ಚಾಲಕ ಪರಾರಿಯಾಗಿದ್ದ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ಗಂಭೀರ ಗಾಯವೂ ಸಹ ಆಗಿತ್ತು.

ಈ ಕುರಿತು ಸಚಿವೆ ಹೆಬ್ಬಾಳ್ಕರ್ ಅವರ ಕಾರು ಚಾಲಕ ಶಿವಪ್ರಸಾದ್ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದ ದೂರಿನ ಅನ್ವಯ ಪ್ರಕರಣದ ವಿಚಾರಣೆ ಆರಂಭಿಸಿದ್ದ ಕಿತ್ತೂರು ಠಾಣೆ ಪೊಲೀಸರು ಹಿರೇಬಾಗೇವಾಡಿ ಟೋಲ್ ಬಳಿಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ 69 ಲಾರಿ ಚಾಲಕರ ವಿಚಾರಣೆ ನಡೆಸಿದ್ದರು.

ಸಚಿವರ ಕಾರಿಗೆ ಕ್ಯಾಂಟರ್ ಡಿಕ್ಕಿಯಾದಾಗ ಕ್ಯಾಂಟರಿನ ನೀಲಿ ಬಣ್ಣ ಕಾರಿಗೆ ಅಂಟಿಕೊಂಡಿತ್ತು. ಸಿಕ್ಕ ಸಾಕ್ಷಿಗಳನ್ನು ಪೊಲೀಸರು ಎಫ್ಎಸ್ ಎಲ್ ಗೆ ರವಾನಿಸಿದ್ದರು. ಆನಂತರ ಸ್ಥಳದಲ್ಲಿದ್ದ ಎಲ್ಲಾ ಸಾಕ್ಷಿಗಳನ್ನು ಪಡೆದುಕೊಂಡು ಆತನಿಗಾಗಿ ಹುಡುಕಾಟ ನಡೆಸಿದ್ದರು. ಇತ್ತೀಚೆಗೆ, ಆತನ ವಾಸಸ್ಥಳದ ಬಗ್ಗೆ ನಿಖರವಾಗಿ ಮಾಹಿತಿ ಕಲೆಹಾಕಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೊದಲಿಗೆ ಅಪಘಾತ ಎಸಗಿಲ್ಲ ಎಂದು ಲಾರಿ ಚಾಲಕ ಮಧುಕರ ಸೋಮವಂಶಿ ಹೇಳಿದ್ದಾನೆ. ಬಳಿಕ ಅಪಘಾತದಲ್ಲಿ ಭಾಗಿಯಾದ ವಾಹನದ ಬಣ್ಣ ಎಫ್‌ಸ್‌ಎಲ್‌ಗೆ ರವಾನೆ ಮಾಡಿದ್ದರು. ಅಲ್ಲದೇ ಘಟನೆ ವೇಳೆ ಫೋನ್ ಕಾಲ್ ಡೀಟೇಲ್ಸ್ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿತ್ತೂರು ಪೊಲೀಸರ ಕಾರ್ಯಕ್ಕೆ ಎಸ್ಪಿ ಭೀಮಾಶಂಕರ ಗುಳೇದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!