ಶಾಮನೂರು ಶಿವಶಂಕರಪ್ಪ 
ರಾಜ್ಯ

ಜಾತಿ ಜನಗಣತಿ ವರದಿ ವಿರುದ್ಧ ಲಿಂಗಾಯತರು-ಒಕ್ಕಲಿಗರಿಂದ ಒಗ್ಗಟ್ಟಿನ ಹೋರಾಟ: ಶಾಮನೂರು ಶಿವಶಂಕರಪ್ಪ

ಜಾತಿ ಗಣತಿ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಹಾಗು ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತದೆಯೇ.

ದಾವಣಗೆರೆ: ಜಾತಿ ಜನಗಣತಿ ವರದಿ ವಿರುದ್ಧ ಲಿಂಗಾಯತರು ಹಾಗೂ ಒಕ್ಕಲಿಗರು ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದಾರೆಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಹಾಗು ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತದೆಯೇ ಎಂದು ಸವಾಲು ಹಾಕಿದರು,

ಸರ್ಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವುದಾಗಿ ಹೇಳುತ್ತಿದೆ. ಆದರೆ, ಮಾಡುತ್ತಿಲ್ಲ. ನಮ್ಮ ಪ್ರಕಾರ ರಾಜ್ಯದಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಅಧಿಕವಾಗಿದೆ. ಎರಡನೇ ಸ್ಥಾನದಲ್ಲಿ ಒಕ್ಕಲಿಗ ಸಮುದಾಯವಿದೆ. ಜಾತಿ ಜನಗಣತಿ ವರದಿ ಬಿಡುಗಡೆ ಮಾಡುವುದಾಗಿ ಸರ್ಕಾರ ಸುಮ್ಮನೆ ಹೇಳುತ್ತಿದೆ. ಒಂದೊಮ್ಮೆ ಬಿಡುಗಡೆ ಮಾಡಿದರೆ ಒಕ್ಕಲಿಗರು ಮತ್ತು ಲಿಂಗಾಯತರು ಒಗ್ಗೂಡಿ ಹೋರಾಟ ಮಾಡುತ್ತೇವೆಂದು ತಿಳಿಸಿದರು.

10 ವರ್ಷಗಳ ಹಿಂದೆ ನಡೆಸಿದ ಸಮೀಕ್ಷೆಯು ಅವೈಜ್ಞಾನಿಕವಾಗಿದ್ದು, ಒಂದು ಸರ್ಕಾರ ವರದಿಯನ್ನು ಜಾರಿಗೆ ತಂದಿದ್ದೇ ಆದರೆ, ಹಿನ್ನಡೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದು ಕೇವಲ ನನ್ನ ಅಭಿಪ್ರಾಯವಷ್ಟೇ ಅಲ್ಲ, ಇತರ ಅನೇಕರ ಅಭಿಪ್ರಾಯವೂ ಆಗಿದೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವರದಿಯ ಬಗ್ಗೆ ಚರ್ಚಿಸಲು ಸರ್ಕಾರ ಯೋಜಿಸುತ್ತಿದೆ. ಸರ್ಕಾರ ಚರ್ಚೆ ಮಾಡಲಿ ಸಾಮಾಜಿಕ-ಆರ್ಥಿಕ-ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಿ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT