ಎಚ್ ಎಂ ರೇವಣ್ಣ IANS
ರಾಜ್ಯ

Survey: '10% ತಪ್ಪಾಗಿರಬಹುದು.. ನಾಯಿ ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಆಗಿಲ್ಲ'- ಕಾಂಗ್ರೆಸ್ ನಾಯಕ HM Revanna

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿಗಣತಿ ವರದಿ ಕರ್ನಾಟಕದಲ್ಲಿ ಹೊಸ ಬಿರುಗಾಳಿಯನ್ನೇ ಸೃಷ್ಟಿಸಿದ್ದು, ಕರ್ನಾಟಕ ಸರ್ಕಾರದ ಜಾತಿ ಗಣತಿ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದಲ್ಲಿಯೇ ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದೆ.

ಬೆಂಗಳೂರು: ಕರ್ನಾಟಕದಲ್ಲಿ ವ್ಯಾಪಕ ಪರ-ವಿರೋಧ ಚರ್ಚೆಗೆ ಗ್ರಾಸವಾಗಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹೆಚ್ ರೇವಣ್ಣ ಸಮರ್ಥನೆ ನೀಡಿದ್ದು, 'ಶೇ.10% ರಷ್ಟು ತಪ್ಪಾಗಿರಬಹುದು.. ನಾಯಿ ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಆಗಿಲ್ಲ' ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿಗಣತಿ ವರದಿ(Karnataka caste census report) ಕರ್ನಾಟಕದಲ್ಲಿ ಹೊಸ ಬಿರುಗಾಳಿಯನ್ನೇ ಸೃಷ್ಟಿಸಿದ್ದು, ಕರ್ನಾಟಕ ಸರ್ಕಾರದ ಜಾತಿ ಗಣತಿ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದಲ್ಲಿಯೇ ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದೆ.

ಈಗಾಗಲೇ ಜಾತಿ ಗಣತಿ ವರದಿಯನ್ನು ಕರ್ನಾಟಕದ ಪ್ರಮುಖ ಜಾತಿಗಳು ವಿರೋಧಿಸಿವೆ. ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ನಾಯಕರು ಸಭೆಗಳನ್ನು ನಡೆಸಿದ್ದಾರೆ. ಇದರೊಂದಿಗೆ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯ ಮಾತ್ರವಲ್ಲದೇ ಈ ಜಾತಿ ಉಪಜಾತಿಗಳ ಜನರನ್ನೂ ಒಂದುಗೂಡಿಸುವ ಪ್ರಯತ್ನಗಳು ನಡೆದಿವೆ.

ನಾಯಿ ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಆಗಿಲ್ಲ

ಇನ್ನು ಜಾತಿ ಗಣತಿ ಕುರಿತ ಪರ-ವಿರೋಧ ಚರ್ಚೆಗಳ ನಡುವೆಯೇ ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಎಚ್‌.ಎಂ ರೇವಣ್ಣ ಅವರು ಜಾತಿ ಗಣತಿಯಲ್ಲಿ 10% ತಪ್ಪಾಗಿರಬಹುದು ಅಂತ ಹೇಳಿದ್ದಾರೆ. ಮುಂದುವರಿದು ಕೆಲವರು ಮನೆಗಳಲ್ಲಿ ನಾಯಿಗಳನ್ನು ಕಟ್ಟಿ ಹಾಕಿರುತ್ತಾರೆ. ಇನ್ನೂ ಕೆಲವು ಮನೆಗಳಲ್ಲಿ ಬಾಗಿಲು ತೆಗೆದಿರುವುದಿಲ್ಲ ಇನ್ನೂ ಕೆಲವು ಮನೆಗಳಿಗೆ ಹೋಗುವುದಕ್ಕೆ ಸಾಧ್ಯವಾಗಿರುವುದಿಲ್ಲ. ಈ ರೀತಿ ಕೆಲವು ಮನೆಗಳಿಗೆ ಹೋಗಲು ಆಗದೆ ಇರುವುದು ತಪ್ಪಲ್ಲ. ಏನಾದರೂ ಬಿಟ್ಟು ಹೋಗುವುದಕ್ಕೆ ಸಾಧ್ಯವಿದೆ. ಈಗ ಹೇಳುವುದಕ್ಕೆ ಅವಕಾಶ ಇದೆ ಎಂದು ಹೇಳಿದ್ದಾರೆ.

ಲಿಂಗಾಯತರು-ಒಕ್ಕಲಿಗರಿಂದ ಒಗ್ಗಟ್ಟಿನ ಹೋರಾಟ: ಶಾಮನೂರು ಶಿವಶಂಕರಪ್ಪ

ಕಾಂಗ್ರೆಸ್‌ ಹಾಗೂ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಶಾಮನೂರು ಶಿವಶಂಕರಪ್ಪ ಕೂಡ ಜಾತಿ ಜನಗಣತಿ ವರದಿ ವಿರುದ್ಧ ಕಿಡಿಕಾರಿದ್ದು, ಲಿಂಗಾಯತರು ಹಾಗೂ ಒಕ್ಕಲಿಗರು ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದಾರೆಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಕೂಡ ಆಗಿರುವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

'ಜಾತಿ ಗಣತಿ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಹಾಗು ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತದೆಯೇ?.. ಸರ್ಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವುದಾಗಿ ಹೇಳುತ್ತಿದೆ. ಆದರೆ, ಮಾಡುತ್ತಿಲ್ಲ. ನಮ್ಮ ಪ್ರಕಾರ ರಾಜ್ಯದಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಅಧಿಕವಾಗಿದೆ. ಎರಡನೇ ಸ್ಥಾನದಲ್ಲಿ ಒಕ್ಕಲಿಗ ಸಮುದಾಯವಿದೆ. ಜಾತಿ ಜನಗಣತಿ ವರದಿ ಬಿಡುಗಡೆ ಮಾಡುವುದಾಗಿ ಸರ್ಕಾರ ಸುಮ್ಮನೆ ಹೇಳುತ್ತಿದೆ. ಒಂದೊಮ್ಮೆ ಬಿಡುಗಡೆ ಮಾಡಿದರೆ ಒಕ್ಕಲಿಗರು ಮತ್ತು ಲಿಂಗಾಯತರು ಒಗ್ಗೂಡಿ ಹೋರಾಟ ಮಾಡುತ್ತೇವೆಂದು ತಿಳಿಸಿದರು.

ಅಡಕತ್ತರಿಯಲ್ಲಿ ಸರ್ಕಾರ

ಇನ್ನು ಜಾತಿ ಗಣತಿ ವಿಚಾರದಲ್ಲಿ ಸ್ವಪಕ್ಷೀಯರು ಮತ್ತು ನಾಯಕರ ವಿರೋಧ ಎದುರಿಸುತ್ತಿರುವ ಸರ್ಕಾರ ಇದೀಗ ಅಡಕತ್ತರಿಯಲ್ಲಿ ಸಿಲುಕಿದ್ದು, ಸಚಿವರಲ್ಲಿ ಜಾತಿ ಜಟಾಪಟಿ ಕಿಡಿಹಾರಿದೆ. ಹೀಗಾಗಿ ಜಾತಿ ಜನಗಣತಿ ವಿಚಾರವಾಗಿ ಆತುರದ ನಿರ್ಧಾರ ಮಾಡದೆ, ಸಿದ್ದರಾಮಯ್ಯ ಸರ್ಕಾರ ಎಚ್ಚರಿಕೆ ಹೆಜ್ಜೆ ಅನುಸರಿಸುವ ತೀರ್ಮಾನಕ್ಕೆ ಬಂದಿದೆ. ಲಿಂಗಾಯತ, ಒಕ್ಕಲಿಗರ ಪ್ರಬಲ ವಿರೋಧದ ನಡುವೆ ಸಿದ್ದರಾಮಯ್ಯ ಸರ್ಕಾರ ಕೈಗೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇದರ ಮಧ್ಯ ಈ ಜಾತಿ ಗಣತಿ ವರದಿಯಲ್ಲಿ ಮತ್ತಷ್ಟು ಗೊಂದಲಕಾರಿ ಅಂಶಗಳಿರುವುದು ಬಯಲಾಗಿದೆ. ಹೀಗಾಗಿ ಈ ವರದಿ ಮತ್ತೊಂದು ಚರ್ಚೆಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT