ಸಾಂದರ್ಭಿಕ ಚಿತ್ರ 
ರಾಜ್ಯ

ದ್ವಿತೀಯ PUC ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೂ CETಗೆ ಹಾಜರಾಗಲು ಸರ್ಕಾರ ಅವಕಾಶ..!

ಆರಂಭಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದಿದ್ದರೂ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸರ್ಕಾರ ಅವಕಾಶ ನೀಡಲಿದೆ.

ಬೆಂಗಳೂರು: ದ್ವಿತೀಯ PUC ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದೆ ಎರಡನೇ ಪರೀಕ್ಷೆಗೆ ನೋಂದಾಯಿಸಿಕೊಂಡ ಶೇ.ಶೇ. 92.4 ರಷ್ಟು ವಿದ್ಯಾರ್ಥಿಗಳೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಹಾಜರಾಗಲು ಅರ್ಹರು ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಆರಂಭಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದಿದ್ದರೂ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸರ್ಕಾರ ಅವಕಾಶ ನೀಡಲಿದೆ ಎಂದು ಹೇಳಿದರು.

ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಒಟ್ಟು 1,69,353 ವಿದ್ಯಾರ್ಥಿಗಳು ಈಗ ಎರಡನೇ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ, ಈ ಪರೀಕ್ಷೆಯು ಏಪ್ರಿಲ್ 24 ರಿಂದ ಮೇ 8 ರವರೆಗೆ ನಡೆಯಲಿದೆ. ಈ ಪರೀಕ್ಷೆಯ ಫಲಿತಾಂಶಗಳನ್ನು ಸಿಇಟಿ ಫಲಿತಾಂಶಕ್ಕೂ ಮುನ್ನವೇ ಪ್ರಕಟಿಸಲಾಗುವುದು. ಇದರಿಂದ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲೇ ಅರ್ಹತೆ ಪಡೆಯಲು ಸಹಕಾರಿಯಾಗಲಿದೆ’ ಎಂದು ತಿಳಿಸಿದರು.

ಇದೇ ವೇಳೆ ಮೂರನೇ ಪರೀಕ್ಷೆಯ ದಿನಾಂಕವನ್ನು ಸಚಿವರು ತಿಳಿಸಿದರು. ಜೂನ್ 9 ರಿಂದ 20 ರವರೆಗೆ ಮೂರನೇ ಪರೀಕ್ಷೆಯನ್ನು ನಿಗದಿಪಡಿಸಲಾಗಿದ್ದು, ಜೂನ್ ಅಂತ್ಯದ ವೇಳೆಗೆ ಫಲಿತಾಂಶಗಳು ನಿರೀಕ್ಷಿಸಲಾಗಿದೆ ಎಂದರು.

ಇದಲ್ಲದೆ, ಮೊದಲ ಪರೀಕ್ಷೆಯಲ್ಲಿ ಉತ್ತೀರ್ಣರಾದ 70,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಸುಧಾರಿಸಲು ಎರಡನೇ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಶೇ.92.4 ವಿದ್ಯಾರ್ಥಿಗಳು ಎರಡನೇ ಪರೀಕ್ಷೆಗೆ ದಾಖಲಾಗಿರುವುದು ಸಕಾರಾತ್ಮಕ ಸಂಕೇತವಾಗಿದೆ ಎಂದು ಹೇಳಿದರು.

ಎರಡನೇ ಪರೀಕ್ಷೆಗೆ ದಾಖಲಾದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ತರಗತಿ ನಡೆಸಲಾಗುತ್ತಿದೆ, ಹಾಜರಾತಿ ದರಗಳು ಶೇ.94ರಷ್ಟು ಹೆಚ್ಚಿವೆ. ಎರಡನೇ ಮತ್ತು ಮೂರನೇ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ತಯಾರಾಗಲು ಸಹಾಯ ಮಾಡಲು ನೈಜ-ಸಮಯದ ಪ್ರತಿಕ್ರಿಯೆಯೊಂದಿಗೆ ನಿಯಮಿತ ಪರೀಕ್ಷೆಗಳನ್ನೂ ರೂಜ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಸಿಇಟಿ ಪರೀಕ್ಷೆ : ಶ 94.20ರಷ್ಟು ವಿದ್ಯಾರ್ಥಿಗಳು ಹಾಜರು

ಈ ನಡುವೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬುಧವಾರದಂದು ಸುಸೂತ್ರವಾಗಿ ನಡೆದಿದ್ದು, ಶೇ. 94.20ರಷ್ಟು ವಿದ್ಯಾರ್ಥಿಗಳು ಎರಡು ಪತ್ರಿಕೆಗಳ ಪರೀಕ್ಷೆಯನ್ನು ಬರೆದಿದ್ದಾರೆ,

ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದ ಒಟ್ಟು 3,21,895 ವಿದ್ಯಾರ್ಥಿಗಳ ಪೈಕಿ 3,11,777 ಮಂದಿ(ಶೇ94.20ರಷ್ಟು) ಪರೀಕ್ಷೆಗೆ ಹಾಜರಾಗಿದ್ದರು. ಬೆಳಗಿನ ಅವಧಿಯಲ್ಲಿ ನಡೆದ ಭೌತಶಾಸ್ತ್ರ ಪತ್ರಿಕೆಗಿಂತ ಮಧ್ಯಾಹ್ನ ನಡೆದ ರಸಾಯನಶಾಸ್ತ್ರ ಪತ್ರಿಕೆಯನ್ನು 183 ಮಂದಿ ಹೆಚ್ಚಿಗೆ ಬರೆದಿದ್ದಾರೆ. ಇಂದು (ಎ.17) ಬೆಳ್ಗೆ ಗಣಿತ ಹಾಗೂ ಮಧ್ಯಾಹ್ನ ಜೀವಶಾಸ್ತ್ರ ಪತ್ರಿಕೆಗಳಿಗೆ ಪರೀಕ್ಷೆ ನಡೆಯಲಿದೆ.

ಕ್ಯಾಮರಾ ಕಣ್ಗಾವಲಿನಲ್ಲಿ ನಡೆದ ಪರೀಕ್ಷೆಗೆ ವ್ಯಾಪಕ ತಯಾರಿ ಮಾಡಿಕೊಳ್ಳಲಾಗಿತ್ತು. ಕ್ಯೂ ಆರ್ ಕೋಡ್ ಮೂಲಕ ಮುಖ ಚಹರೆ ಪತ್ತೆ ಹಚ್ಚಿ ಅಭ್ಯರ್ಥಿಗಳ ನೈಜತೆ ತಿಳಿಯುವ ವ್ಯವಸ್ಥೆ ಇದೇ ಮೊದಲ ಬಾರಿಗೆ ಜಾರಿ ಮಾಡಿದ್ದು ಸಂಪೂರ್ಣ ಯಶ್ವಸಿಯಾಗಿದೆ.

ಬೆಳಗಿನ ಪರೀಕ್ಷೆಗೆ ಕೆಲಕಡೆ ತಾಂತ್ರಿಕ ದೋಷ ಕಂಡುಬಂದರೂ ಮಧ್ಯಾಹ್ನ ಆ ರೀತಿ ಯಾವ ತೊಂದರೆಯೂ ಆಗಲಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಪ್ರವೇಶ ಪತ್ರ ಇಲ್ಲದೆ, ವಿವಿಧ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರದಾಡುತ್ತಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊನೆ ಕ್ಷಣದಲ್ಲಿ ಪ್ರವೇಶ ಪತ್ರ ಒದಗಿಸುವ ಕೆಲಸವನ್ನು ಕೆಇಎ ಸಿಬ್ಬಂದಿ ಮಾಡಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಕರೆ ಮಾಡಿ ‘ತಮ್ಮ ಮೊಬೈಲ್‍ನಲ್ಲಿ ಕರೆನ್ಸಿ ಇಲ್ಲ, ನಂಬರ್ ಬ್ಲಾಕ್ ಅಗಿದೆ. ಹೀಗಾಗಿ ಡೌನ್‍ಲೋಡ್ ಮಾಡಿಕೊಳ್ಳಲು ಓಟಿಪಿ ಬರುತ್ತಿಲ್ಲ' ಎನ್ನುತ್ತಿದ್ದವರಿಗೆ ಕೆಇಎ ಸಿಬ್ಬಂದಿಯೇ ವಾಟ್ಸ್ ಅಪ್ ಮೂಲಕ ಪ್ರವೇಶ ಪತ್ರ ಕಳುಹಿಸಿ ಪರಿಕ್ಷೆ ಬರೆಯಲು ನೆರವಾದರು. ಹೀಗೆ ಸಿಬ್ಬಂದಿಗಳು ಬೆಳಿಗ್ಗೆ 10.29ರವರೆಗೆ ಯುದ್ದೋಪಾದಿಯಲ್ಲಿ ಕೆಲಸ ನಿರ್ವಹಿಸಿ ವಿದ್ಯಾರ್ಥಿಗಳಿಗೆ ನೆರವಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!