ಸಿಎಂ ಸಿದ್ದರಾಮಯ್ಯ 
ರಾಜ್ಯ

ಕೊರೋನಾದಿಂದ ಜನ ಸಾಯುವಾಗ ಬೆಲೆಯೇರಿಕೆ ಮಾಡಿದ ಪಾಪಿಗಳು ಈ ಬಿಜೆಪಿಗರು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಎಲ್‌ಪಿಜಿ ಸಿಲಿಂಡರ್‌ಗಳು, ಅಕ್ಕಿ, ಚಿನ್ನ ಮತ್ತು ಇತರ ಎಲ್ಲಾ ಸರಕುಗಳ ಬೆಲೆ ಏರಿಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ದೇಶದ ಮಧ್ಯಮ ವರ್ಗ ಮತ್ತು ಬಡ ಜನರ ವಿರೋಧಿಯಾಗಿದೆ. ಗ್ಯಾಸ್ ಸಬ್ಸಿಡಿ ತೆಗೆದು ಪ್ರಧಾನಿ ಮೋದಿ ಸರ್ಕಾರ ಬಡವರ ವಿರೋಧಿಯೆನಿಸಿದೆ. ಔಷಧಿ, ಗೊಬ್ಬರ, ಡೀಸೆಲ್, ಪೆಟ್ರೋಲ್ ಸೇರಿ ಎಲ್ಲದರ ಬೆಲೆ ಏರಿಕೆ ಮಾಡುವ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಯಾವ ಮುಖವಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುತ್ತಿದೆ? 4 ರು. ಹಾಲಿನ ದರ ಹೆಚ್ಚಿಸಿ ಅದನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಇದರಲ್ಲಿ ನಯಾಪೈಸೆಯೂ ಸರ್ಕಾರದ ಖಜಾನೆಗೆ ಬರುವುದಿಲ್ಲ. ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದು ರಾಜಕೀಯ ಬದ್ಧತೆಯೇ ಆಗಿದೆ. ಸುಳ್ಳೇ ಬಿಜೆಪಿಯ ಮನೆ ದೇವರು. ಆರ್‌ಎಸ್‌ಎಸ್ ಸುಳ್ಳಿನ ಮಹಾ ಕಾರ್ಖಾನೆ. ಅಂಬೇಡ್ಕರ್ ಅವರನ್ನು ಸೋಲಿ ಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇ ಡೈರ್ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ ಎಂದು ವ್ಯಂಗ್ಯವಾಡಿದರು.

ಆರೆಸ್ಸೆಸ್ ಸುಳ್ಳಿನ ಕಾರ್ಖಾನೆ: ನಾವು ಸುಳ್ಳಿನ ಕಾರ್ಖಾನೆ ಆರ್‌ಎಸ್‌ಎಸ್‌ನ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು. ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂ. ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.

ಇದೇ ವೇಳೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು.

ಕೊರೊನಾದಿಂದ ಜನ ಸಾಯುವಾಗ ಬೆಲೆಯೇರಿಕೆ ಮಾಡಿದ ಪಾಪಿಗಳು ಈ ಬಿಜೆಪಿಗರು. ಕಾಂಗ್ರೆಸ್‌ ಕಾರ್ಯಕರ್ತರು ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಿದ್ಧರಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಲು ಮತ್ತು ಬಿಜೆಪಿಯ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸಬೇಕು ಎಂದು ಶಾಸಕರಿಗೆ ಮನವಿ ಮಾಡಿದರು.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ದೇಶದ ಇಂಧನ, ರಸಗೊಬ್ಬರ, ಪೆಟ್ರೋಲ್ ಸೇರಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ. ಜನಾಕ್ರೋಶ ಏನಿದ್ದರೂ ಬಿಜೆಪಿ ಸರ್ಕಾರದ ವಿರುದ್ಧ ವ್ಯಕ್ತವಾಗಬೇಕೇ ಹೊರತು ಬೆಲೆ ಏರಿಕೆ ತಗ್ಗಿಸಲು ಗ್ಯಾರಂಟಿ ಯೋಜನೆ ಕೊಟ್ಟ ನಮ್ಮ ವಿರುದ್ಧವಲ್ಲ ಎಂದರು.

ಬಿಜೆಪಿಯ ರಾಜ್ಯ ನಾಯಕರಿಗೆ ನಾಚಿಕೆಯಾಗಬೇಕು. ಮೋದಿ ಅವರು ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಸಾರಿಗೆ ವೆಚ್ಚ, ವಿದ್ಯುತ್ ದರ, ಕೃಷಿ ವೆಚ್ಚ ತರಕಾರಿ ದಿನಸಿ ಬೆಲೆ, ಸಿಮೆಂಟ್, ಕಬ್ಬಿಣ ದರವಿಪರೀತ ಏರಿಕೆಯಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯ ಕರು ನ್ಯಾಯವಾಗಿ ಮೋದಿ ಅವರ ಸರ್ಕಾರದ ವಿರುದ್ಧ ಹೋರಾಡಬೇಕು. ಆದರೆ, ಬಡವರ ಪರವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧವಲ್ಸ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT